ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

LS polls 2024 | ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ: ಪ್ರಧಾನಿ ಮೋದಿ ಕರೆ

Published 25 ಮೇ 2024, 2:15 IST
Last Updated 25 ಮೇ 2024, 2:15 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಇಂದು (ಶನಿವಾರ) ನಡೆಯುತ್ತಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾರರಿಗೆ ಕರೆ ನೀಡಿದ್ದಾರೆ.

‘ಲೋಕಸಭೆ ಚುನಾವಣೆಯ 6ನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ಜನರಲ್ಲಿ ನಾನು ವಿನಂತಿಸುತ್ತೇನೆ. ನಿಮ್ಮ ಮತ ಸೇರಿದಂತೆ ಪ್ರತಿಯೊಂದು ಮತವೂ ಎಣಿಕೆಯಾಗುತ್ತದೆ. ಜನರು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಮತ್ತು ಸಕ್ರಿಯವಾಗಿದ್ದಾಗ ಮಾತ್ರ ಪ್ರಜಾಪ್ರಭುತ್ವವು ಅಭಿವೃದ್ಧಿ ಹೊಂದುತ್ತದೆ. ವಿಶೇಷವಾಗಿ ಮಹಿಳೆಯರು ಮತ್ತು ಯುವ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ನಾನು ವಿನಂತಿಸುತ್ತೇನೆ’ ಎಂದು ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇಂದು ಒಟ್ಟು 58 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಒಟ್ಟು 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೆಹಬೂಬಾ ಮುಫ್ತಿ, ಮನೋಹರ್‌ ಲಾಲ್‌ ಖಟ್ಟರ್‌, ಧರ್ಮೇಂದ್ರ ಪ್ರಧಾನ್‌, ದೀಪೇಂದರ್‌ ಹೂಡಾ, ಕನ್ಹಯ್ಯ ಕುಮಾರ್‌ ಸೇರಿದಂತೆ ಹಲವು ಘಟಾನುಘಟಿ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಇದೇ ಹಂತದಲ್ಲಿ ಒಡಿಶಾದ 42 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯಲಿದೆ. ಉತ್ತರ ಭಾರತದ ಹಲವು ಭಾಗಗಳಲ್ಲಿ ತಾಪಮಾನವು ಅಧಿಕವಾಗಿದೆ. ಜೊತೆಗೆ, ಕೆಲವೆಡೆ ಮಳೆಯ ಮುನ್ಸೂಚನೆಯೂ ಇದೆ. ಹೀಗಾಗಿ, ಮತದಾರರ ಆರೋಗ್ಯವನ್ನು ಹಾಗೂ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಚುನಾವಣಾ ಆಯೋಗ ಹೇಳಿದೆ.

ಹಕ್ಕು ಚಲಾಯಿಸಿದ ಜೈಶಂಕರ್, ಹರಿಯಾಣ ಸಿಎಂ ಸೈನಿ

ಕೇಂದ್ರ ಸಚಿವರಾದ ಎಸ್‌. ಜೈಶಂಕರ್, ಹರ್ದೀಪ್ ಸಿಂಗ್ ಪುರಿ, ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಅವರು ಮತದಾನ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT