ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಜೆಡಿಎಸ್ ನಾಯಕರಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ ಕಾಂಗ್ರೆಸ್‌ಗೆ

Published 22 ಮಾರ್ಚ್ 2024, 9:04 IST
Last Updated 22 ಮಾರ್ಚ್ 2024, 9:04 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯರಾದ ಮರಿತಿಬ್ಬೇಗೌಡ ಮತ್ತು ಅಪ್ಪಾಜಿಗೌಡ ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಶಾಸಕರಾದ ಉದಯ್, ರವಿಕುಮಾರ್ ಗಣಿಗ, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಕೆ.‌ಸಲೀಂ ಅಹ್ಮದ್, ದಿನೇಶ್ ಗೂಳಿಗೌಡ ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡರು. ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಉಪಸ್ಥಿತರಿದ್ದರು.

ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಮಾಜಿ ಸದಸ್ಯರಾದ ಯೋಗೇಶ್, ಮಂಜುನಾಥ್, ರಾಜರಾಜೇಶ್ವರಿ ಮತ್ತು ಬಿಜೆಪಿಯ ಆಶಾ ಸುರೇಶ್ ಕೂಡ ಕಾಂಗ್ರೆಸ್ ಪಕ್ಷ ಸೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT