ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೆನ್ ಡ್ರೈವ್ ಬಿಡುಗಡೆ ಮಾಡಿದ್ದು ನಾನಲ್ಲ:ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಹೇಳಿಕೆ

Published 30 ಏಪ್ರಿಲ್ 2024, 11:49 IST
Last Updated 30 ಏಪ್ರಿಲ್ 2024, 11:49 IST
ಅಕ್ಷರ ಗಾತ್ರ

ಹಾಸನ : ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಲ್ಲಿ ವಿಡಿಯೊ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಕುಟುಂಬದ ಕಾರು ಚಾಲಕನಾಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ಹಿಂಸೆ ಕೊಟ್ಟರು, ಆದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದು ಹೇಳಿದ್ದಾರೆ.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ರೇವಣ್ಣ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಎಂದು ದೇವರಾಜೇಗೌಡ ಬಳಿ ಹೋದೆ. ನಂತರ ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್‌ ರೇವಣ್ಣ ಸ್ಟೇ ತರುತ್ತಾರೆ ಎಂದು ಹೇಳಿದ್ದಾರೆ.

ನಿನ್ನ ಬಳಿ ಇರುವ ವಿಡಿಯೊ, ಫೋಟೋಸ್, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊಗಳ ಒಂದು ಕಾಪಿಯನ್ನು ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೇ ಎಂಬುದು ಗೊತ್ತಿಲ್ಲ. ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೊ ಕೊಟ್ಟಿಲ್ಲ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರಿಗೆ ಕೊಟ್ಟಿದ್ದೆ. ಪೆನ್‌ ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲವನ್ನೂ ವಿವರಿಸುತ್ತೇನೆ. ನಂತರ ಮಾಧ್ಯಮದವರಿಗೂ ಮಾಹಿತಿ ನೀಡುತ್ತೇನೆ. ಕಾಂಗ್ರೆಸ್‌ನವರ ಹೆಸರನ್ನು ಬೆರೆಸಬೇಡಿ. ದೇವರಾಜೇಗೌಡರಿಗೆ ಬಿಟ್ಟರೆ ಯಾರಿಗೂ ಒಂದು ತುಣುಕು ಕೊಟ್ಟಿಲ್ಲ. ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆ ಧೈರ್ಯವಾಗಿ ಮುಂದೆ ಬನ್ನಿ ಎಂದು ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೊ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT