ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅನಂತ್–ರಾಧಿಕಾ ಮದುವೆ: ಬಚ್ಚನ್‌ ಕುಟುಂಬದಿಂದ ಅಂತರ ಕಾಯ್ದುಕೊಂಡರೇ ಐಶ್ವರ್ಯಾ ರೈ?

Published : 13 ಜುಲೈ 2024, 13:47 IST
Last Updated : 13 ಜುಲೈ 2024, 13:47 IST
ಫಾಲೋ ಮಾಡಿ
Comments

ಬೆಂಗಳೂರು: ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಹಾಗೂ ನಟ ಅಭಿಷೇಕ್‌ ಬಚ್ಚನ್‌ ದಾಂಪತ್ಯದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ವದಂತಿ ಹಬ್ಬಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅನಂತ್ ಅಂಬಾನಿ ಹಾಗೂ ರಾಧಿಕಾ ಮದುವೆ ಕಾರ್ಯಕ್ರಮದಲ್ಲಿ ಇಬ್ಬರೂ ಬೇರೆ ಬೇರೆಯಾಗಿ ಕಾಣಿಸಿಕೊಂಡಿದ್ದಾರೆ.

ಈ ಹಿಂದೆ ಅವರಿಬ್ಬರೂ ಡಿವೋರ್ಸ್ ಪಡೆದಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಆದರೆ ಈವರೆಗೂ ಐಶ್ವರ್ಯಾರಾಗಲಿ ಅಥವಾ ಅಭಿಷೇಕ್‌ ಬಚ್ಚನ್‌ ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ.

ಡಿವೋರ್ಸ್‌ ಸುದ್ದಿ ಬೆನ್ನಲ್ಲೇ ಮಗಳು ಆರಾಧ್ಯಳ ಶಾಲಾ ಕಾರ್ಯಕ್ರಮದಲ್ಲಿ ಐಶ್ವರ್ಯಾ ಹಾಗೂ ಅಭಿಷೇಕ್‌ ಬಚ್ಚನ್‌ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದರು.

ಅನಂತ್‌ ಅಂಬಾನಿ– ರಾಧಿಕಾ ಮರ್ಚೆಂಟ್‌ ಅವರ ಮದುವೆ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಬಚ್ಚನ್‌ ಹಾಗೂ ಮಗಳು ಆರಾಧ್ಯ ಭಾಗಿಯಾಗಿದ್ದರು. ಮತ್ತೊಂದೆಡೆ ಬಚ್ಚನ್‌ ಕುಟುಂಬ ಸದಸ್ಯರೆಲ್ಲರೂ ಪ್ರತ್ಯೇಕವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅಭಿಷೇಕ್‌ ಹಾಗೂ ಐಶ್ವರ್ಯಾ ರೈ ಒಟ್ಟಿಗೆ ಕಾಣಿಸಿಕೊಳ್ಳದಿರುವುದರ ಬಗ್ಗೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮೂಲಕ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಕಾರಣವೇನಿರಬಹುದು ಎಂದು ಪ್ರಶ್ನೆ ಮಾದರಿಯಲ್ಲೇ ಕಾಮೆಂಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT