ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್ ಮನೆಯ ಹೊರಗೆ ಗುಂಡಿನ ಸದ್ದು, ಭದ್ರತೆ ಬಿಗಿ

Published 14 ಏಪ್ರಿಲ್ 2024, 2:47 IST
Last Updated 14 ಏಪ್ರಿಲ್ 2024, 2:47 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಇಲ್ಲಿನ ನಿವಾಸದ ಎದುರು ಆಗಂತುಕರಿಬ್ಬರು ಗುಂಡು ಹಾರಿಸಿದ ಘಟನೆ ಭಾನುವಾರ ನಡೆದಿದೆ.

ಎರಡು ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಮುಂಜಾನೆ 5 ಗಂಟೆ ವೇಳೆಗೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಈ ಬೆನ್ನಲ್ಲೇ, ಖಾನ್‌ ನಿವಾಸದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸ್ಥಳೀಯ ಪೊಲೀಸರು ಮತ್ತು ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿ, ತನಿಖೆ ಆರಂಭಿಸಿದ್ದಾರೆ ಎಂದೂ ಹೇಳಿದರು.

ಘಟನೆ ವೇಳೆ ಸಲ್ಮಾನ್‌ ಖಾನ್‌ ನಿವಾಸದಲ್ಲಿ ಇದ್ದರೇ ಎಂಬ ಬಗ್ಗೆ ‍ಪೊಲೀಸರಾಗಲೀ, ಖಾನ್‌ ಕುಟುಂಬಸ್ಥರಾಗಲೀ ಮಾಹಿತಿ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT