ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಧರಣಿ: ಬಿಜೆಪಿ ಪ್ರಧಾನ ಕಚೇರಿಗೆ ಬಿಗಿ ಭದ್ರತೆ

Published 22 ಮಾರ್ಚ್ 2024, 3:33 IST
Last Updated 22 ಮಾರ್ಚ್ 2024, 3:33 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

ಬಿಜೆಪಿ ಕಚೇರಿ ಹತ್ತಿರದ ರಸ್ತೆಗಳಿಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಅಲ್ಲದೆ ಪ್ರಧಾನ ಕಚೇರಿಗೆ ತೆರಳುವ ರಸ್ತೆಗಳನ್ನು ಬಂದ್‌ ಮಾಡಲಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸೆಂಟ್ರಲ್‌ ದೆಹಲಿ ಸುತ್ತಮುತ್ತ ಓಡಾಟವನ್ನು ತಪ್ಪಿಸಿ ಎಂದು ಸಾರ್ವಜನಿಕರಿಗೆ ಪೊಲಿಸರು ಮನವಿ ಮಾಡಿದ್ದಾರೆ. 

ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾಗಲಿದ್ದು, ದೆಹಲಿಯ ಎಲ್ಲಾ ಶಾಸಕರು ಮತ್ತು ಕೌನ್ಸಿಲರ್‌ಗಳಿಗೆ ಬಿಜೆಪಿ ಪ್ರಧಾನ ಕಚೇರಿಯ ಬಳಿ ಸಮಾವೇಶಗೊಳ್ಳಲು ಸೂಚಿಸಲಾಗಿದೆ ಎಂದು ಎಎಪಿ ಮೂಲಗಳು ತಿಳಿಸಿವೆ. 

ನೆರೆಯ ರಾಜ್ಯಗಳಿಂದ ಎಎಪಿ ಕಾರ್ಯಕರ್ತರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ದೆಹಲಿಯ ಗಡಿಗಳಲ್ಲಿ ಪೊಲೀಸರು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT