ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರಿ ತಾಪಮಾನ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಿಷೇಧಾಜ್ಞೆ!

ಮೇ 30ರವರೆಗೆ ಅಕೋಲಾ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.
Published 26 ಮೇ 2024, 5:52 IST
Last Updated 26 ಮೇ 2024, 5:52 IST
ಅಕ್ಷರ ಗಾತ್ರ

ಅಕೋಲಾ, ಮಹಾರಾಷ್ಟ್ರ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರತದಲ್ಲಿಯೇ ಅತ್ಯಧಿಕ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಠ 45° ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ಇನ್ನೂ ಐದು ದಿನ ಅಕೋಲಾ ಜಿಲ್ಲೆಯಲ್ಲಿ ಗರಿಷ್ಠ ಉಷ್ಣತೆ ದಾಖಲಾಗುವ ಮುನ್ಸೂಚನೆ ಇದ್ದು ಮೇ 30ರವರೆಗೆ ಅಕೋಲಾ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ. ಯಾವುದೇ ಹೊರಾಂಗಣ ಸಭೆ ಸಮಾರಂಭಗಳನ್ನು ಆಯೋಜಿಸಲು ನಿರ್ಬಂಧ ವಿಧಿಸಲಾಗಿದೆ. ಕೋಚಿಂಗ್ ಕ್ಲಾಸ್ ಗಳನ್ನು ಸಂಜೆವರೆಗೆ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಅಲ್ಲದೇ ಸಾರ್ವಜನಿಕರಿಗೆ ನೀರು ಕೊರತೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT