ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯಾ ರ್‍ಯಾಲಿ: ಕೇಜ್ರಿವಾಲ್ ಪತ್ನಿ ಸುನೀತಾ ಭಾಗಿ?

Published 31 ಮಾರ್ಚ್ 2024, 5:24 IST
Last Updated 31 ಮಾರ್ಚ್ 2024, 5:24 IST
ಅಕ್ಷರ ಗಾತ್ರ

ನವದೆಹಲಿ: ರಾಮಲೀಲಾ ಮೈದಾನದಲ್ಲಿ ಆಯೋಜಿಸಿರುವ ‘ಇಂಡಿಯಾ’ ಮೈತ್ರಿಕೂಟದ ಮಹಾ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಭಾಗವಹಿಸಲಿದ್ದಾರೆ ಎಂದು ಎಎಪಿಯ ಮೂಲಗಳು ತಿಳಿಸಿವೆ.

‘ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರು ಮಹಾ ರ್‍ಯಾಲಿಯಲ್ಲಿ ಭಾಗಹಿಸುತ್ತಾರೆ. ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ತಮ್ಮ ಪತಿ ಕಳುಹಿಸಿರುವ ಸಂದೇಶವನ್ನು ಓದುತ್ತಾರೆ. ಇದು ದೇಶಕ್ಕೆ ಕೇಜ್ರಿವಾಲ್ ನೀಡಿದ ಸಂದೇಶವಾಗಿರಲಿದೆ’ ಎಂದು ಅದು ತಿಳಿಸಿದೆ.

ರ್‍ಯಾಲಿಯಲ್ಲಿ ಮೈತ್ರಿಕೂಟದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್, ಉದ್ಧವ್ ಠಾಕ್ರೆ, ಅಖಿಲೇಶ್ ಯಾದವ್ ಮತ್ತು ತೇಜಸ್ವಿ ಯಾದವ್ ಭಾಗವಹಿಸಲಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT