ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣ: ಶರಣಾದ 11 ಅಪರಾಧಿಗಳು

Published 22 ಜನವರಿ 2024, 14:23 IST
Last Updated 22 ಜನವರಿ 2024, 14:23 IST
ಅಕ್ಷರ ಗಾತ್ರ

ಅಹಮದಾಬಾದ್‌: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳು ಸುಪ್ರೀಂ ಕೋರ್ಟ್‌ ವಿಧಿಸಿದ್ದ ಗಡುವು ಮುಗಿಯುವ ಕೆಲವೇ ಕ್ಷಣಗಳ ಮುನ್ನ, ಭಾನುವಾರ ರಾತ್ರಿ 11:30ಕ್ಕೆ ಗೋಧ್ರಾ ಉಪ ಕಾರಾಗೃಹದ ಅಧಿಕಾರಿಗಳ ಮುಂದೆ ಶರಣಾದರು.

ಶರಣಾಗಲು ಹೆಚ್ಚುವರಿ ಕಾಲಾವಕಾಶ ನೀಡಬೇಕು ಎಂದು ಅಪರಾಧಿಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿತ್ತು.

ಅಪರಾಧಿಗಳು ಎರಡು ಖಾಸಗಿ ವಾಹನಗಳಲ್ಲಿ ಕಾರಾಗೃಹದ ಎದುರು ಬಂದಿಳಿದರು. ಈ ವೇಳೆ ಜೈಲಿನ ಹೊರಗೆ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿತ್ತು. 

ಶೈಲೇಶ್ ಭಟ್ಬಾ, ಬಕಾಭಾಯ್ ವೊಹಾನಿಯಾ, ಬಿಪಿನ್ ಚಂದ್ರ ಜೋಷಿ, ಕೇಸರ್‌ಭಾಯ್ ವೊಹಾನಿಯಾ, ಗೋವಿಂದ ನಾಯ್, ಜಸ್ವಂತ ನಾಯ್, ಮಿತೇಶ್ ಭಟ್, ಪ್ರದೀಪ್ ಮೊರ್ಧಿಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನ ಅವರು ಶರಣಾದ ಅಪರಾಧಿಗಳು. 

ಇವರಿಗೆ ಗುಜರಾತ್ ಸರ್ಕಾರವು ಕ್ಷಮಾದಾನ ನೀಡಿ, ಅವರನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು. ಆದರೆ, ಅವರ ಬಿಡುಗಡೆಯನ್ನು ಸುಪ್ರೀಂ ಕೋರ್ಟ್‌ ಜನವರಿ 8ರಂದು ರದ್ದುಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT