ಚೆನ್ನೈ: ತಮಿಳುನಾಡಿನ ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕೆ. ತಿರುವೆಂಗಡಂ ಅವರನ್ನು ತನಿಖೆಯ ಭಾಗವಾಗಿ ಉತ್ತರ ಚೆನ್ನೈಗೆ ಕರೆದೊಯ್ಯಲಾಗಿತ್ತು. ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಲು ಮುಂದಾಗಿದ್ದ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಆತನ ಮೇಲೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
30 ವರ್ಷದ ತಿರುವೆಂಗಡಂ ಅವರು ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣದಲ್ಲಿ ಬಂಧಿತರಾದ 11 ಮಂದಿ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಮೂಲತಃ ರೌಡಿ ಶೀಟರ್ ಆಗಿರುವ ತಿರುವೆಂಗಡಂ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಲಯವು ಐದು ದಿನ ಪೊಲೀಸರ ವಶಕ್ಕೆ ನೀಡಿತ್ತು.
ಜುಲೈ 5ರಂದು ಆರ್ಮ್‌ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆಯನ್ನು ಖಂಡಿಸಿದ್ದ ವಿಪಕ್ಷ ನಾಯಕರು ಡಿಎಂಕೆ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆಕ್ರೋಶ ಹೊರಹಾಕಿದ್ದರು.ಚೆನ್ನೈ: ತಮಿಳುನಾಡಿನ ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕೆ. ತಿರುವೆಂಗಡಂ ಅವರನ್ನು ತನಿಖೆಯ ಭಾಗವಾಗಿ ಉತ್ತರ ಚೆನ್ನೈನ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಕೃತ್ಯದ ಬಳಿಕ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಲು ಮುಂದಾಗಿದ್ದ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಆತನ ಮೇಲೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
30 ವರ್ಷದ ತಿರುವೆಂಗಡಂ ಅವರು ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣದಲ್ಲಿ ಬಂಧಿತರಾದ 11 ಮಂದಿ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಮೂಲತಹ ರೌಡಿ ಶೀಟರ್ ಆಗಿರುವ ತಿರುವೆಂಗಡಂ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಲಯವು ಐದು ದಿನ ಪೊಲೀಸರ ವಶಕ್ಕೆ ನೀಡಿತ್ತು.
ಜುಲೈ 5ರಂದು ಆರ್ಮ್‌ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆಯನ್ನು ಖಂಡಿಸಿದ್ದ ವಿಪಕ್ಷ ನಾಯಕರು ಡಿಎಂಕೆ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆಕ್ರೋಶ ಹೊರಹಾಕಿದ್ದರು.
#WATCH | Tamil Nadu: Thiruvengadam, an accused in the murder case of Tamil Nadu BSP state president K Armstrong, was killed in a police encounter in Madhavaram area near Chennai.
— ANI (@ANI) July 14, 2024
Additional Commissioner of Police, Chennai North, Narendra Nair said, "The encounter took place… pic.twitter.com/qzNVseoWhL
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.