ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹60 ಕೋಟಿ ಲಂಚ ಪ‍್ರಕರಣ: ರೈಲ್ವೆ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ

Published 23 ಜನವರಿ 2024, 16:29 IST
Last Updated 23 ಜನವರಿ 2024, 16:29 IST
ಅಕ್ಷರ ಗಾತ್ರ

ನವದೆಹಲಿ: ಈಶಾನ್ಯ ಫ್ರಾಂಟಿಯರ್ ರೈಲ್ವೆ ವಲಯದಲ್ಲಿ 2016–23ರ ಅವಧಿಯಲ್ಲಿ ನಡೆದಿದೆ ಎನ್ನಲಾದ ₹60 ಕೋಟಿ ಲಂಚ ಪ‍್ರಕರಣಕ್ಕೆ ಸಂಬಂಧಿಸಿದಂತೆ  ರೈಲ್ವೆಯ ಏಳು ಅಧಿಕಾರಿಗಳು ಹಾಗೂ ಭಾರತೀಯ ಇನ್ಫ್ರಾ ಪ್ರಾಜೆಕ್ಟ್ಸ್ ಲಿಮಿಟೆಡ್ (ಬಿಐಪಿಎಲ್‌) ಎನ್ನುವ ಖಾಸಗಿ ಕಂಪನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲೇ ಬೃಹತ್ ಎನ್ನಲಾಗುವ ಈ ಹಗರಣದ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಅಸ್ಸಾಂ, ತ್ರಿಪುರಾ, ಮಣಿಪುರ ಮತ್ತು ದೆಹಲಿಯಲ್ಲಿ ಆರೋಪಿಗಳು ಹಾಗೂ ಕಂಪನಿಗೆ ಸೇರಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು.

ಈ ವೇಳೆ ಹಗರಣದ ಪ್ರಮುಖ ಸಾಕ್ಷ್ಯಗಳು ಹಾಗೂ ಆರೋಪಿಗಳ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   

ಮೇ 2016 ಮತ್ತು ಜುಲೈ 2023ರ ನಡುವೆ ರೈಲ್ವೆ ಅಧಿಕಾರಿಗಳು ಬಿಐಪಿಎಲ್‌ನಿಂದ ನಗದಿನ ಮೂಲಕ ಹಾಗೂ ತಮ್ಮ ಸಂಬಂಧಿಕರ ಬ್ಯಾಂಕ್ ಖಾತೆಗಳ ಮೂಲಕ ಹಣ ಪಡೆದಿರುವುದು ಬಹಿರಂಗಗೊಂಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ‘ಬಿಲ್‌ಗಳನ್ನು ಪಾವತಿಸಲು‘ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.     

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT