ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಪ್ರೀಂ ಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ

Published : 12 ಜುಲೈ 2023, 20:21 IST
Last Updated : 12 ಜುಲೈ 2023, 20:21 IST
ಫಾಲೋ ಮಾಡಿ
Comments

ನವದೆಹಲಿ: ತೆಲಂಗಾಣ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ಕೇರಳ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ವೆಂಕಟನಾರಾಯಣ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ.  

ಜುಲೈ 5 ರಂದು ಕೊಲಿಜಿಯಂ ಮಾಡಿದ್ದ ಶಿಫಾರಿಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಇಬ್ಬರ ನೇಮಕವನ್ನು ಅಂತಿಮಗೊಳಿಸಿದೆ.

ಭುಯಾನ್ ಅವರು ಆಂಧ್ರಪ್ರದೇಶದವರು. 2011ರಲ್ಲಿ ಗುವಾಹಟಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ವೆಂಕಟನಾರಾಯಣ ಭಟ್ಟಿ ಅವರು 2013ರಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಈ ಇಬ್ಬರ ನೇಮಕದೊಂದಿಗೆ, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT