ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Loksabha Election 2024: ಕಾಂಗ್ರೆಸ್‌ನ 39 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್; ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್ ಅವರನ್ನು ಕಣಕ್ಕಿಳಿಸಿದೆ.
Published 8 ಮಾರ್ಚ್ 2024, 14:13 IST
Last Updated 8 ಮಾರ್ಚ್ 2024, 14:28 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು, 39 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಶುಕ್ರವಾರ ಪ್ರಕಟಿಸಿದೆ.

ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡ್‌ನಿಂದ ಸ್ಪರ್ಧಿಸಲಿದ್ದಾರೆ. ಕೇರಳದ ಅಲಪ್ಪುಳದಿಂದ ಕೆ.ಸಿ.ವೇಣುಗೋಪಾಲ್, ಅತ್ತಿಂಗಳ್‌ನಿಂದ ಡಾ. ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ರಾಜನಾನಂದಗಾಂವ್‌ನಿಂದ ಕಣಕ್ಕಿಳಿಸುವುದಾಗಿ ಪಕ್ಷ ಹೇಳಿದೆ.

ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್‌.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್‌, ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಅಂತಿಮಗೊಳಿಸಿದೆ.

ಉಳಿದಂತೆ ಛತ್ತೀಸಗಢ 6; ಕೇರಳ– 16; ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ತಲಾ 1, ಮೇಘಾಲಯ 2; ತೆಲಂಗಾಣ– 4 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌ನ ಪ್ರದಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಸಾಮಾಜಿಕ ನ್ಯಾಯದ ಅಡಿಯಲ್ಲಿ 15 ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಒಟ್ಟು 24 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪವನ್ ಕೇರಾ, ಅಜಯ್ ಮಾಕೆನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT