ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಸಂಜಯ್‌ ನಿರುಪಮ್ ಉಚ್ಚಾಟನೆ

Published 3 ಏಪ್ರಿಲ್ 2024, 19:28 IST
Last Updated 3 ಏಪ್ರಿಲ್ 2024, 19:28 IST
ಅಕ್ಷರ ಗಾತ್ರ

ಮುಂಬೈ: ಶಿವಸೇನಾ(ಉದ್ಧವ್ ಠಾಕ್ರೆ) ಗುರಿಯಾಗಿಸಿ ಹೇಳಿಕೆ ನೀಡಿದ್ದ ಪಕ್ಷದ ಮುಖಂಡ ಸಂಜಯ್‌ ನಿರುಪಮ್‌ ಅವರನ್ನು ಪಕ್ಷದಿಂದ ಆರು ವರ್ಷಗಳ ಅವಧಿಗೆ ಬುಧವಾರ ಉಚ್ಚಾಟಿಸಲಾಗಿದೆ.

ಅಶಿಸ್ತಿನ ವರ್ತನೆ ಹಾಗೂ ಪಕ್ಷ ವಿರೋಧಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನಿರುಪಮ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಕ್ಷದ ಮಹಾರಾಷ್ಟ್ರ ಘಟಕ ವರಿಷ್ಠರಿಗೆ ಮನವಿ ಮಾಡಿತ್ತು. ಇದರ ಬೆನ್ನಲ್ಲೇ,  ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿರುಪಮ್‌ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ತಮ್ಮ ವಿರುದ್ಧ ಕ್ರಮ ಕೈಗೊಂಡ ನಂತರ ಪ್ರತಿಕ್ರಿಯಿಸಿರುವ ನಿರುಪಮ್‌, ‘ನನ್ನ ಮುಂದಿನ ನಡೆ ಕುರಿತು ಗುರುವಾರ ಘೋಷಣೆ ಮಾಡುವೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT