ತಿರುವನಂತಪುರ/ನವದೆಹಲಿ: ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ ಕಮ್ಯುನಿಸ್ಟ್ ಪಕ್ಷವು ಅಧಿಕಾರದಲ್ಲಿರುವ ಏಕೈಕ ರಾಜ್ಯವನ್ನೂ ಕಳೆದುಕೊಂಡಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಹತ್ತು ವರ್ಷ ಆಡಳಿತ ನಡೆಸಿದ್ದ ಸಿಪಿಎಂ ತನ್ನ ಆಂತರಿಕ ಸಮಸ್ಯೆಗಳು ಹಾಗೂ ಆಡಳಿತ ವಿರೋಧಿ ಅಲೆಯಿಂದ ಈ ಚುನಾವಣೆಯಲ್ಲಿ ಸೋಲು ಕಂಡಿದೆ.

2021ರಲ್ಲಿ ಪಿಣರಾಯಿ ಅವರ ಜನಪ್ರಿಯತೆಯನ್ನು ಬಳಸಿಕೊಂಡು 99 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಕೇರಳಂನಲ್ಲಿ ಅಧಿಕಾರವನ್ನು ಉಳಿಸಿಕೊಂಡಿದ್ದ ಎಲ್ಡಿಎಫ್, ಪಿಣರಾಯಿ ಅವರ ವಿರೋಧಿ ಅಲೆಯಿಂದಾಗಿಯೇ ಈ ಬಾರಿ ದೊಡ್ಡ ಹೊಡೆತ ಅನುಭವಿಸಿದೆ.

2025ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್ಡಿಎಫ್ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಹೆಚ್ಚಾಗಿತ್ತು. ಪಿಣರಾಯಿ ಸರ್ಕಾರವು ಮಹಿಳೆಯರು ಮತ್ತು ಯುವಕರನ್ನು ಕೇಂದ್ರೀಕರಿಸಿ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಆ ವಿರೋಧಿ ಅಲೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿದರೂ ನಿರೀಕ್ಷಿತ ಫಲ ನೀಡಿರಲಿಲ್ಲ.

ಪಿಣರಾಯಿ ಅವರು ಹಲವು ಹಾಲಿ ಶಾಸಕರಿಗೆ ಟಿಕೆಟ್ ನೀಡದೆ ಮೂಲೆಗುಂಪು ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಇದು ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿತ್ತು.

‘ಪಾಠ ಕಲಿಯದ ಸಿಪಿಎಂ’:

ದೇಶದಲ್ಲಿ ಕೇರಳಂ ಹೊರತುಪಡಿಸಿದರೆ ಸದ್ಯ ಯಾವ ರಾಜ್ಯದಲ್ಲೂ ಕಮ್ಯುನಿಸ್ಟ್ ಪಕ್ಷ ಅಧಿಕಾರದಲ್ಲಿ ಇರಲಿಲ್ಲ. 1969ರ ನವೆಂಬರ್ನಿಂದ ಈವರೆಗೆ ಕೇರಳಂ ಸೇರಿದಂತೆ ಕೆಲ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಆದರೆ, ಕೇರಳಂನಲ್ಲಿ ಅಧಿಕಾರದಲ್ಲಿದ್ದ ಸಿಪಿಎಂ 2026ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಮೂಲಕ ಅಧಿಕಾರವನ್ನು ಕಳೆದುಕೊಂಡಿದೆ.

ಕೇರಳಂನಲ್ಲಿ ಪಕ್ಷದ ಮೇಲೆ ಪ್ರಭುತ್ವ ಸಾಧಿಸಿದ್ದ ಪಿಣರಾಯಿ ವಿಜಯನ್ ಅವರನ್ನು ನಿಯಂತ್ರಿಸಲು ವಿಫಲವಾದ ಸಿಪಿಎಂ ನಾಯಕತ್ವವೇ ಈ ಬೆಳವಣಿಗೆಗೆ ಮೂಲ ಕಾರಣ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಸಿಪಿಎಂ ಒಂದು ಸ್ಥಾನ ಗೆದ್ದಿದೆ. 2021ರಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಆ ಪಕ್ಷಕ್ಕೆ ಈ ಬಾರಿ ಒಂದು ಸ್ಥಾನ ಸಿಕ್ಕಿರುವುದು ತುಸು ಸಮಾಧಾನ ತಂದಿದೆ. ತಮಿಳುನಾಡಿನಲ್ಲಿಯೂ ಡಿಎಂಕೆ ಮೈತ್ರಿಕೂಟದ ಬೆಂಬಲದೊಂದಿಗೆ ಸಿಪಿಎಂ ಮತ್ತು ಸಿಪಿಐ ಪಕ್ಷಗಳು ಜಯಗಳಿಸಿವೆ.

2011ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಕಳೆದುಕೊಂಡ ನಂತರವೂ ಆ ಪಕ್ಷವು ಪಾಠ ಕಲಿತಂತೆ ಕಾಣುತ್ತಿಲ್ಲ. ಅದೇ ತಪ್ಪುಗಳನ್ನು ಪುನರಾವರ್ತಿಸುತ್ತಿದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.

ಕೇರಳಂನಲ್ಲಿ ಪಿಣರಾಯಿ ವಿಜಯನ್ ಅವರೇ ಅಧಿಕಾರದ ಕೇಂದ್ರಬಿಂದುವಾಗಿದ್ದಾರೆ. ಇದು ಎಡಪಕ್ಷಗಳ ಸಿದ್ಧಾಂತಕ್ಕೆ ವಿರುದ್ಧವಾಗಿ, ಪಕ್ಷದ ಒಳಗಿನ ನಿಯಂತ್ರಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಅಧಿಕಾರವು ಒಬ್ಬರಲ್ಲೇ ಕೇಂದ್ರೀಕೃತವಾಗಲು ಕಾರಣವಾಗಿದೆ.

ಯುಡಿಎಫ್ಗೆ ಅನುಕೂಲವಾದ ಅಂಶಗಳು

ಚುನಾವಣೆವರೆಗೂ ಪಕ್ಷದೊಳಗಿನ ಒಳಜಗಳ ಬಹಿರಂಗಗೊಳ್ಳದಂತೆ ನೋಡಿಕೊಂಡ ಕಾಂಗ್ರೆಸ್

ರಾಜ್ಯ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ವಿವಿಧ ಭರವಸೆಗಳು

ಕೇಂದ್ರ ಸರ್ಕಾರ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ಸಿಆರ್ಎ) ತಿದ್ದುಪಡಿಗೆ ಮುಂದಾಗಿದ್ದರಿಂದ ಬಿಜೆಪಿಗೆ ಕೈತಪ್ಪಿದ ಕ್ರೈಸ್ತರ ಮತಗಳು

ಕ್ರೈಸ್ತರು ಹಾಗೂ ಮುಸ್ಲಿಂ ಮತ ಸೆಳೆಯುವಲ್ಲಿ ಸಫಲವಾದ ಯುಡಿಎಫ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.