ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ಕೇಜ್ರಿವಾಲ್

Published 24 ಮಾರ್ಚ್ 2024, 4:16 IST
Last Updated 24 ಮಾರ್ಚ್ 2024, 4:16 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ಭಾನುವಾರ ತಿಳಿಸಿವೆ.

ಇ.ಡಿ ಬಂಧನದಲ್ಲಿರುವ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಮೊದಲ ನಿರ್ದೇಶನವನ್ನು ಹೊರಡಿಸಿದ್ದಾರೆ. ಇದು ಜಲ ಇಲಾಖೆಗೆ ಸಂಬಂಧಪಟ್ಟದ್ದಾಗಿದೆ. ಜಲ ಸಚಿವೆ ಅತಿಶಿ ಅವರು ಇಂದು ಆದೇಶದ ಕುರಿತು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇ.ಡಿ ಬಂಧನಕ್ಕೊಳಗಾದರೂ ಕೇಜ್ರಿವಾಲ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಎಎಪಿ ತಿಳಿಸಿತ್ತು.

ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಕೇಜ್ರಿವಾಲ್ ಅವರನ್ನುಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್ 22ರಂದು ದೆಹಲಿಯ ವಿಶೇಷ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಮಾರ್ಚ್ 28ರವರೆಗೆ ಇ.ಡಿ ವಶಕ್ಕೆ ನೀಡಿತ್ತು.

ಈ ನಡುವೆ ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಅವರು ಶನಿವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೋಳಿ ರಜೆಯ ಕಾರಣ ನ್ಯಾಯಾಲಯವು ಇದೇ 27ಕ್ಕೂ ಮೊದಲು ಈ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT