ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಬೆನ್ನಲ್ಲೇ ದೆಹಲಿಯಲ್ಲಿ ಹೈ ಅಲರ್ಟ್

Published 2 ಮಾರ್ಚ್ 2024, 7:52 IST
Last Updated 2 ಮಾರ್ಚ್ 2024, 7:52 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನ ‘ದಿ ರಾಮೇಶ್ವರಂ ಕೆಫೆ’ ಹೋಟೆಲ್‌ನಲ್ಲಿ ಕಚ್ಚಾ ಬಾಂಬ್ (ಐಇಡಿ) ಸ್ಫೋಟ ಸಂಭವಿಸಿದ ಬೆನ್ನಲ್ಲೇ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಮಾರುಕಟ್ಟೆಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್ ಸಮೀಪದ ಬ್ರೂಕ್‌ಫೀಲ್ಡ್‌ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ ಹೋಟೆಲ್‌ನಲ್ಲಿ ಶುಕ್ರವಾರ ಟೈಮರ್ ಚಾಲಿತ ಕಚ್ಚಾ ಬಾಂಬ್ (ಐಇಡಿ) ಸ್ಫೋಟಿಸಲಾಗಿದ್ದು, ಗ್ರಾಹಕರು ಸೇರಿ 10 ಮಂದಿ ಗಾಯಗೊಂಡಿದ್ದಾರೆ.

ದುಷ್ಕರ್ಮಿಗಳ ಕೃತ್ಯದ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT