ಹಿಜಾಬ್ ನಿಷೇಧಿಸಿದ ಆದೇಶವನ್ನು ಪ್ರಶ್ನಿಸಿದ್ದ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ವಜಾ ಮಾಡಿತ್ತು. ‘ಇಸ್ಲಾಂ ನಂಬಿಕೆ ಅನುಸಾರ ಹಿಜಾಬ್ ಧಾರ್ಮಿಕ ಆಚರಣೆಯ ಭಾಗವಲ್ಲ’ ಎಂದು ಹೇಳಿತ್ತು. ಇದನ್ನು ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ, ಸುಪ್ರಿಂ ಕೋರ್ಟ್‌ನಲ್ಲಿ ಈ ಸಂಬಂಧ ಭಿನ್ನ ಅಭಿಪ್ರಾಯದ ತೀರ್ಪು ಬಂದಿತ್ತು.