ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ಜಯಿನಿ: ನಡುರಸ್ತೆಯಲ್ಲಿ ಅತ್ಯಾಚಾರ ಸಂತ್ರಸ್ತೆಯ ನರಳಾಟ

Published 28 ಸೆಪ್ಟೆಂಬರ್ 2023, 8:12 IST
Last Updated 28 ಸೆಪ್ಟೆಂಬರ್ 2023, 8:12 IST
ಅಕ್ಷರ ಗಾತ್ರ

ಇಂದೋರ್: ಮಧ್ಯಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ ರಕ್ತಸ್ರಾವದಿಮದ ನರಳುತ್ತಿದ್ದ 12 ವರ್ಷದ ಬಾಲಕಿ ಪತ್ತೆಯಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ.

ಘಟನೆ ಕುರಿತಂತೆ ಭಾರೀ ಜಾನಾಕ್ರೋಶದ ಬಳಿಕ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಆಘಾತಕಾರಿ ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ಹೇಳಿದ್ದಾರೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಹಾಳಾಗಿದೆ ಎಂದು ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಉಜ್ಜಯಿನಿಯಿಂದ ಇಂದೋರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆ ನಡೆದಿದ್ದು, ಬಾಲಕಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಜ್ಞ ವೈದ್ಯರು ಆಕೆಯ ಆರೋಗ್ಯದ ಮೇಲೆ ನಿರಂತರವಾಗಿ ನಿಗಾ ಇಟ್ಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

‘ಬಾಲಕಿಯು ಉಜ್ಜಯಿನಿಯ ಹೊರವಲಯದವಳಂತೆ ಕಾಣುತ್ತಾಳೆ. ಆಕೆಗೆ ಘಟನೆಗ ಬಗ್ಗೆ ಹೇಳಿಕೊಳ್ಳಲೂ ಸಾಧ್ಯವಾಗದ ಕಾರಣ, ತಜ್ಞರು ಮತ್ತು ಸಲಹೆಗಾರರ ​​ಸಹಾಯದಿಂದ ಅವಳೊಂದಿಗೆ ಮಾತನಾಡಲು ಪ್ರಯತ್ನಿಸಲಾಗುತ್ತಿದೆ’ಎಂದು ಗೃಹ ಸಚಿವರು ಹೇಳಿದರು.

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರದ ಕುರಿತು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ದಾಳಿ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಗೃಹ ಸಚಿವರು, "ನಿಮಗೆ ಕಾಂಗ್ರೆಸ್ ಪ್ರಮಾಣಪತ್ರ ಬೇಕೇ?"

ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ರಕ್ತಸ್ರಾವದಲ್ಲೇ ಬಾಲಕಿ ನಡೆದುಕೊಂಡು ಹೋಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT