ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 9 ಸಾವು, 200 ಮಂದಿಗೆ ಗಾಯ

Published 6 ಫೆಬ್ರುವರಿ 2024, 9:16 IST
Last Updated 6 ಫೆಬ್ರುವರಿ 2024, 9:16 IST
ಅಕ್ಷರ ಗಾತ್ರ

ಭೋಪಾಲ್‌/ಹರ್ದಾ: ಮಧ್ಯಪ್ರದೇಶದ ಹರ್ದಾ ಪಟ್ಟಣದ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 9 ಜನರು ಮೃತಪಟ್ಟಿದ್ದು, ಸುಮಾರು 200 ಮಂದಿ ಗಾಯಗೊಂಡಿದ್ದಾರೆ.

ರಾಜಧಾನಿ ಭೋಪಾಲ್‌ನಿಂದ ಸುಮಾರು 150 ಕಿ.ಮೀ ದೂರದಲ್ಲಿ ಹರ್ದಾ ಪಟ್ಟಣ ಇದೆ. ಇಲ್ಲಿನ ಹೊರವಲಯದ ಮಗರ್ಧ ರಸ್ತೆಯಲ್ಲಿರುವ ಬೈರಾಗರ್‌ ಪ್ರದೇಶದ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.

ಕಾರ್ಖಾನೆಯಲ್ಲಿ ಸ್ಫೋಟಗಳು ನಡೆಯುತ್ತಿರುವ ಹಾಗೂ ಜನರು ರಕ್ಷಣೆಗಾಗಿ ಓಡುತ್ತಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಗಳಲ್ಲಿ ಬಿತ್ತರಗೊಂಡಿವೆ. ಸ್ಫೋಟದ ಪರಿಣಾಮ ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.‌

ಗಾಯಗೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ದುಬೆ ತಿಳಿಸಿದ್ದಾರೆ.

ದುರಂತದ ವಿಷಯ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಮೋಹನ್ ಯಾದವ್‌ ಅವರು ಈ ಕುರಿತು ಕೇಂದ್ರ ಸರ್ಕಾರಕ್ಕೂ ಮಾಹಿತಿ ನೀಡಿದ್ದಾರೆ. 

ಪರಿಹಾರ ಘೋಷಣೆ: ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಹಾಗೂ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. 

ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹ 50,000 ನೆರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT