ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೊಮಾಲಿಯಾದ ಕರಾವಳಿ ಬಳಿ 15 ಮಂದಿ ಭಾರತೀಯರಿದ್ದ ಹಡಗು ಅಪಹರಣ

Published : 5 ಜನವರಿ 2024, 7:36 IST
Last Updated : 5 ಜನವರಿ 2024, 7:36 IST
ಫಾಲೋ ಮಾಡಿ
Comments

ನವದೆಹಲಿ: ಸೊಮಾಲಿಯಾ ಕರಾವಳಿಯ ಬಳಿ 15 ಮಂದಿ ಭಾರತೀಯ ಸಿಬ್ಬಂದಿ ಇದ್ದ ಹಡಗನ್ನು ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಲೈಬೀರಿಯಾ ಧ್ವಜ ಹೊಂದಿದ್ದ ಹಡಗನ್ನು (MV LILA NORFOLK) ದುಷ್ಕರ್ಮಿಗಳು ಅಪಹರಿಸಿದ್ದಾರೆ. ಈ ಹಡಗಿನಲ್ಲಿ 15 ಭಾರತೀಯ ಸಿಬ್ಬಂದಿ ಇದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಭಾರತೀಯ ನೌಕಾಪಡೆಯ ಯುದ್ಧನೌಕೆ ‘ಐಎನ್‌ಎಸ್’ ಚೆನ್ನೈ, ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಅಪಹರಣಕ್ಕೊಳಗಾದ ಹಡಗಿನ ಮೇಲೆ ನಿಗಾ ಇರಿಸಲಾಗಿದ್ದು, ಭಾರತೀಯ ಸಿಬ್ಬಂದಿಯೊಂದಿಗೆ ಸಂವಹನ ನಡೆಸಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT