ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ ಜೋಡೊ ನ್ಯಾಯ ಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಜೈರಾಮ್ ರಮೇಶ್

Published 19 ಜನವರಿ 2024, 5:21 IST
Last Updated 19 ಜನವರಿ 2024, 5:21 IST
ಅಕ್ಷರ ಗಾತ್ರ

ಶಿವಸಾಗರ್‌/ಜೋರ್‌ಹಾಟ್‌ (ಅಸ್ಸಾಂ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ನ್ಯಾಯ ಯಾತ್ರೆಯು ಅಸ್ಸಾಂನ ಮಜುಲಿಯಲ್ಲಿ ಸಾಗುತ್ತಿದೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ನಾವು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಭಾರತ ಜೋಡೊ ನ್ಯಾಯ ಯಾತ್ರೆಗೆ ಜನರು ಸೇರದಂತೆ ತಡೆಯಲು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಯಾತ್ರೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ 7 ದಿನಗಳ ಕಾಲ ನಾವು ಅಸ್ಸಾಂನಲ್ಲಿರುತ್ತೇವೆ. ಸಿಎಂಗೆ ಸಾಧ್ಯವಾದರೆ ನಮ್ಮನ್ನು ಬಂಧಿಸಲಿ’ ಎಂದು ಸವಾಲು ಹಾಕಿದ್ದಾರೆ.

ನಿಗದಿತ ಮಾರ್ಗ ಬದಲಿಸಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಭಾರತ ಜೋಡೊ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವರ ಮೇಲೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜೋರ್ಹತ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಗೌರವ್ ಗೊಗೋಯ್, ‘ಅಸ್ಸಾಂನ ಜನರು ನಮ್ಮೊಂದಿಗಿದ್ದಾರೆ. ನಾವು ಯಾರಿಗೂ ಅಥವಾ ಯಾವುದೇ ಎಫ್‌ಐಆರ್‌ಗೂ ಹೆದರುವುದಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT