ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂಂಚ್‌: ಉಗ್ರರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮ

Published 5 ಮೇ 2024, 3:35 IST
Last Updated 5 ಮೇ 2024, 3:35 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (ಐಎಎಫ್‌) ಬೆಂಗಾವಲು ವಾಹನದ ಮೇಲೆ ಶನಿವಾರ ಸಂಜೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಸುರನಕೋಟ ಪ್ರದೇಶದ ಶಾಹಸಿತಾರ್ ಬಳಿ ಈ ದಾಳಿ ನಡೆದಿದ್ದು, ವಾಯುಪಡೆಯ ಐವರು ಸಿಬ್ಬಂದಿ ಗಾಯಗೊಂಡಿದ್ದರು. ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಕ್ಕಿ ಪಹಾಡೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯ ಹಿಂದಿರುವ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಸೇನೆ ಮ‌ತ್ತು ಪೊಲೀಸರು ಶನಿವಾರದಿಂದಲೇ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು, ಭಾನುವಾರವೂ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಭಯೋತ್ಪಾದಕರು ದಾಳಿ ನಡೆಸಿದ ನಂತರ ಕಾಡಿನೊಳಗೆ ಪರಾರಿಯಾಗಿದ್ದು ಕಾರ್ಯಾಚರಣೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT