ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

Published : 21 ಜುಲೈ 2024, 6:41 IST
Last Updated : 21 ಜುಲೈ 2024, 6:41 IST
ಫಾಲೋ ಮಾಡಿ
Comments

ಚೆನ್ನೈ: ತಮಿಳುನಾಡಿನ ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿ ಹರಿಧರನ್‌ ಸೇರಿ ಇಲ್ಲಿಯವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗ್ರೇಟರ್ ಚೆನ್ನೈ ಪೊಲೀಸರು ತಿಳಿಸಿದ್ದಾರೆ.

ವಿಚಾರಣೆ ವೇಳೆ ಕೆಲ ಮಾಹಿತಿಗಳು ಹೊರಬಿದ್ದಿದ್ದು, ಸಾಕ್ಷ್ಯ ನಾಶಪಡಿಸುವ ಸಲುವಾಗಿ ಮೊಬೈಲ್ ಫೋನ್‌ಗಳನ್ನು ವಕೀಲ ಮತ್ತು ಎಐಎಡಿಎಂಕೆ ಯೂನಿಯನ್ ಸಮಿತಿ ಸದಸ್ಯ ಕೆ. ಹರಿಧರನ್ ಎಂಬುವರಿಗೆ ನೀಡಿರುವುದಾಗಿ, ಆತ ಅವುಗಳನ್ನು ವೆಂಗತ್ತೂರಿನ ಕೊಸಸ್ಥಲೈ ನದಿಗೆ ಎಸೆದಿದ್ದಾನೆ ಎಂಬ ಮಾಹಿತಿಯನ್ನು ಆರೋಪಿ ಅರುಲ್ ಎಂಬಾತ ಬಾಯ್ಬಿಟ್ಟಿದ್ದನು ಎಂದು ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಪಿ ನೀಡಿದ ಮಾಹಿತಿ ಮೇರೆಗೆ ಹರಿಧರನ್‌ನನ್ನು ಬಂಧಿಸಲಾಗಿದೆ. ಪೊಲೀಸ್ ಇಲಾಖೆಯ ವಿಶೇಷ ತಂಡಗಳು ಆರು ಮೊಬೈಲ್ ಫೋನ್‌ಗಳಲ್ಲಿ ಮೂರನ್ನು ವಶಪಡಿಸಿಕೊಂಡಿದ್ದು, ಉಳಿದ ಫೋನ್‌ಗಳಿಗಾಗಿ ಹುಡುಕಾಟ ನಡೆಸುತ್ತಿವೆ ಎಂದು ಹೇಳಿದ್ದಾರೆ.

ಜುಲೈ 5ರಂದು ಆರ್ಮ್‌ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT