ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ | ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡ ಕುಸಿತ: 4 ಜನರಿಗೆ ಗಾಯ

Published 9 ಮಾರ್ಚ್ 2024, 9:48 IST
Last Updated 9 ಮಾರ್ಚ್ 2024, 9:48 IST
ಅಕ್ಷರ ಗಾತ್ರ

ಮೋರ್ಬಿ: ಗುಜರಾತ್‌ನ ಮೋರ್ಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ವೈದ್ಯಕೀಯ ಕಾಲೇಜಿನ ಭಾಗವೊಂದು ಕುಸಿದ ಪರಿಣಾಮ ಕನಿಷ್ಠ 4 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಕಟ್ಟಡ ಕುಸಿದ ಸಂದರ್ಭದಲ್ಲಿ ಗಾಯಗೊಂಡ ನಾಲ್ವರು ಕಾರ್ಮಿಕರು ಮೇಲ್ಛಾವಣಿ ಸಿದ್ಧಪಡಿಸುತ್ತಿದ್ದರು. ಈ ಹಂತದಲ್ಲಿ ಸ್ಲಾಬ್ ಕುಸಿದ ಪರಿಣಾಮ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಮತ್ತು ಕಾಲೇಜು ಆಡಳಿತ ಮಂಡಳಿಯ ಸದಸ್ಯರು ಸ್ಥಳಕ್ಕೆ ಧಾವಿಸಿದರು. ಪರಿಸ್ಥಿತಿ ಅವಲೋಕಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು ಎಂದು ವರದಿಯಾಗಿದೆ.

ಮತ್ತೊಬ್ಬ ಕಾರ್ಮಿಕ ಅವಶೇಷಗಳಡಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದೇ ಮೋರ್ಬಿಯಲ್ಲಿ 2022ರಲ್ಲಿ ತೂಗು ಸೇತುವೆ ಕುಸಿದು 135 ಜನ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT