ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿಗೆ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ.
ಭಾರತ್ ಜೋಡೊ ನ್ಯಾಯ ಯಾತ್ರೆ ಅಂಗವಾಗಿ ರಾಹುಲ್ ಗಾಂಧಿ ಮಾಲ್ಡಾಗೆ ತೆರಳಿದ್ದರು.
‘ಕಲ್ಲು ತೂರಾಟದಿಂದ ಕಾರಿನ ಹಿಂಬದಿ ಕಿಟಕಿಯ ಗಾಜು ಜಖಂಗೊಂಡಿದ್ದು, ರಾಹುಲ್ ಗಾಂಧಿಗೆ ಯಾವುದೇ ಗಾಯಗಳಾಗಿಲ್ಲ’ ಎಂದು ಅವರು ಹೇಳಿದರು.
ಯಾತ್ರೆಯು ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಮರು ಪ್ರವೇಶಿಸುತ್ತಿದ್ದಂತೆ ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದೆ. ರಾಹುಲ್ ಗಾಂಧಿ ಅವರು ಕಾರನ್ನು ಪರೀಕ್ಷಿಸುತ್ತಿರುವ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡಿದೆ.