ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ಎಸ್‌ಐಟಿ ಸದಸ್ಯರ ಜೊತೆ ಬುಧವಾರ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್‌ಐಟಿ ಮುಖ್ಯಸ್ಥ ಸುಭಾಷ್ ತ್ರಿವೇದಿ, ‘ರಾಜ್‌ಕೋಟ್ ಮಹಾನಗರ ಪಾಲಿಕೆಯ ಅಧಿಕಾರಿಗಳು, ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆ, ವಿದ್ಯುತ್ ಕಂಪನಿಯ ಅಧಿಕಾರಿಗಳನ್ನು ಕೂಡ ತನಿಖೆಗೆ ಒಳಪಡಿಸುವಂತೆ ನಮಗೆ ಸೂಚನೆ ಸಿಕ್ಕಿದೆ. ಅವರು ತಪ್ಪು ಮಾಡಿದ್ದಾರೆ ಎಂದಾದರೆ ಕಠಿಣ ಕ್ರಮ ಜರುಗಿಸಲು ನಮಗೆ ಸೂಚನೆ ಬಂದಿದೆ’ ಎಂದು ತಿಳಿಸಿದ್ದಾರೆ.