ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಜರಾತ್‌ | ಮಳೆ ಸಂಬಂಧಿತ ಅವಘಡದಲ್ಲಿ 7 ಸಾವು: 6,000ಕ್ಕೂ ಹೆಚ್ಚು ಜನರ ಸ್ಥಳಾಂತರ

Published : 27 ಆಗಸ್ಟ್ 2024, 9:24 IST
Last Updated : 27 ಆಗಸ್ಟ್ 2024, 9:24 IST
ಫಾಲೋ ಮಾಡಿ
Comments

ಅಹಮದಾಬಾದ್: ಸತತ ಮೂರನೇ ದಿನವೂ ಗುಜರಾತ್‌ನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ ಏಳು ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಂಧಿನಗರ, ಖೇಡಾ ಮತ್ತು ವಡೋದರಾ ಜಿಲ್ಲೆಗಳಲ್ಲಿ ಗೋಡೆ ಕುಸಿದ ಪರಿಣಾಮ ನಾಲ್ವರು ಮೃತಪಟ್ಟರೆ. ಆನಂದ್ ಜಿಲ್ಲೆಯಲ್ಲಿ ಮರ ಬಿದ್ದು ಒಬ್ಬ ವ್ಯಕ್ತಿ ಮತ್ತು ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ.

ನಿರಂತರ ಮಳೆಯಿಂದಾಗಿ ನದಿಗಳು ಮತ್ತು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಹೆಚ್ಚಿದ ಕಾರಣ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಪಂಚಮಹಲ್, ನವಸಾರಿ, ವಲ್ಸಾದ್, ವಡೋದರಾ, ಭರೂಚ್, ಖೇಡಾ, ಗಾಂಧಿನಗರ ಮತ್ತು ಅರಾವಳಿ ಜಿಲ್ಲೆಗಳ ಸುಮಾರು 6,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.

ಪಂಚಮಹಲ್‌ನಲ್ಲಿ ಸುಮಾರು 2,000 ಜನರನ್ನು, ವಡೋದರಾದಲ್ಲಿ 1,000, ನವಸಾರಿಯಲ್ಲಿ 1,200 ಮತ್ತು ವಲ್ಸಾದ್‌ನಲ್ಲಿ 800 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ರಾಜ್ಯದ ಬಹುತೇಕ ಭಾಗಗಳಲ್ಲಿ, ಬುಧವಾರ ಮತ್ತು ಗುರುವಾರ ಸೌರಾಷ್ಟ್ರ-ಕಛ್ ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಗುರುವಾರ ರಾಜ್ಯದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT