ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢ: 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Published 7 ಜೂನ್ 2024, 23:36 IST
Last Updated 7 ಜೂನ್ 2024, 23:36 IST
ಅಕ್ಷರ ಗಾತ್ರ

ನಾರಾಯಣಪುರ(ಛತ್ತೀಸಗಢ): ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಶುಕ್ರವಾರ ನಡೆದ ಗುಂಡಿನ ಕಾಳಗದಲ್ಲಿ 7 ನಕ್ಸಲರ ಹತ್ಯೆಯಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆ ಆರ್ಛ ಪ್ರದೇಶದ ಬಳಿಯ ಅರಣ್ಯದಲ್ಲಿ ಮಧ್ಯಾಹ್ನ ಕೈಗೊಂಡಿದ್ದ ನಕ್ಸಲ ನಿಗ್ರಹ ಕಾರ್ಯಾಚರಣೆ ವೇಳೆ ಈ ಗುಂಡಿನ ಕಾಳಗ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಹತರಾದ ನಕ್ಸಲರ ದೇಹಗಳ ಜೊತೆಗೆ, ಸ್ಥಳದಲ್ಲಿದ್ದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಹತರಾದ ನಕ್ಸಲರ ಗುರುತು ಪತ್ತೆ ಮಾಡಬೇಕಿದೆ. ಇದರೊಂದಿಗೆ, ಈ ವರ್ಷ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈ ವರೆಗೆ 125 ನಕ್ಸಲರನ್ನು ಹತ್ಯೆ ಮಾಡಿದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT