ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಯೋಧ್ಯೆ ರಾಮ ಮಂದಿರಕ್ಕೆ ಇಂದು ಸಾಂಪ್ರದಾಯಿಕ ಬಿಲ್ಲು ಸಮರ್ಪಣೆ

Published 17 ಜನವರಿ 2024, 22:43 IST
Last Updated 17 ಜನವರಿ 2024, 22:43 IST
ಅಕ್ಷರ ಗಾತ್ರ

ತಿರುವನಂತಪುರ: ರಾಮಲಲ್ಲಾ ಪ್ರತಿಷ್ಠಾಪನೆ ಅಂಗವಾಗಿ ಇಲ್ಲಿನ ಶ್ರೀ ಪದ್ಮನಾಭಸ್ವಾಮಿ ದೇವಾಲಯವು ಅಯೋಧ್ಯೆಯ ರಾಮಮಂದಿರಕ್ಕೆ ‘ಓಣವಿಲ್ಲ್‌’  ವರ್ಣಚಿತ್ರಗಳನ್ನು ಒಳಗೊಂಡ ಸಾಂಪ್ರದಾಯಿಕ ಬಿಲ್ಲನ್ನು ಗುರುವಾರ ಕೊಡುಗೆಯಾಗಿ ನೀಡಲಿದೆ.

ಮರದಿಂದ ಈ ಬಿಲ್ಲು ತಯಾರಿಸಲಾಗಿದೆ. ವಿಷ್ಣುವಿನ ವಿವಿಧ ಅವತಾರಗಳನ್ನು ಇದರಲ್ಲಿ ಚಿತ್ರಿಸಲಾಗಿದೆ.

 ರಜೆ ಘೋಷಿಸಲು ಒತ್ತಾಯ

ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪಿಸುವ ಇದೇ 22ರಂದು ಸುಪ್ರೀಂಕೋರ್ಟ್‌, ಹೈಕೋರ್ಟ್‌ಗಳು ಮತ್ತು ಜಿಲ್ಲಾ ನ್ಯಾಯಾಲಯಗಳಿಗೆ ರಜೆ ಘೋಷಿಸಬೇಕೆಂದು ಭಾರತದ ವಕೀಲರ ಸಂಘದ ಅಧ್ಯಕ್ಷ ಮನನ್‌ ಕುಮಾರ್‌ ಮಿಶ್ರಾ ಅವರು ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್‌ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಯಕ್ರಮದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಮಹತ್ವವನ್ನು ‍ಪರಿಗಣಿಸಿ ರಜೆ ನೀಡಬೇಕೆಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT