ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ | ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಸಿಎಂ ಧಾಮಿ

Published 31 ಡಿಸೆಂಬರ್ 2023, 3:28 IST
Last Updated 31 ಡಿಸೆಂಬರ್ 2023, 3:28 IST
ಅಕ್ಷರ ಗಾತ್ರ

ಮಥುರಾ: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಹೇಳಿದ್ದಾರೆ.

ಸಾಧ್ವಿ ಋತಂಭರಾ ಅವರ 60ನೇ ವರ್ಷದ ಸನ್ಯಾಸತ್ವ ಸ್ವೀಕಾರದ ಷಷ್ಠಿ ಪೂರ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಶೀಘ್ರದಲ್ಲಿಯೇ ಅನುಮೋದನೆಗಾಗಿ ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ಧರ್ಮಗಳ ಜನರಿಗೆ ವೈಯಕ್ತಿಕ ಕಾನೂನುಗಳ ಸಾಮಾನ್ಯ ಸಂಕೇತವಾಗಿದೆ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಧಾಮಿ, ರಾಮ ಭಕ್ತರ ಮೇಲೆ ಗುಂಡಿನ ದಾಳಿಗೆ ಕಾರಣರಾದ ಜನರು ಎಂದಿಗೂ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸುವ ಪ್ರಯತ್ನವನ್ನು ಮಾಡಲಿಲ್ಲ. ವಿರೋಧ ಪಕ್ಷಗಳು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ಹಾಗೂ ತ್ರಿವಳಿ ತಲಾಖ್‌ ಅನ್ನು ರದ್ದುಗೊಳಿಸಲಿಲ್ಲ ಎಂದು ಹೇಳಿದ್ದಾರೆ.

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರವನ್ನು ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ಮೂಲಕ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸುವ ಬದ್ಧತೆಯು ಪೂರ್ಣಗೊಳ್ಳಲಿದೆ ಎಂದು ಧಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT