ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Kathua Terror Attack | ಸಂಸತ್ತಿನಲ್ಲಿ ಮಾತನಾಡುತ್ತೇನೆ: ರಾಹುಲ್ ಗಾಂಧಿ

Published : 9 ಜುಲೈ 2024, 14:26 IST
Last Updated : 9 ಜುಲೈ 2024, 14:26 IST
ಫಾಲೋ ಮಾಡಿ
Comments

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, 'ಈ ಕುರಿತು ಸಂಸತ್ತಿನಲ್ಲಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಇಂದು ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದರು. ಬಳಿಕ ದೆಹಲಿಗೆ ಹಿಂತಿರುಗಿದರು.

ಈ ವೇಳೆ ವರದಿಗಾರರು ಕಥುವಾ ಭಯೋತ್ಪಾದಕರ ದಾಳಿ ಬಗ್ಗೆ ಪ್ರಶ್ನಿಸಿದ್ದಾರೆ. ಇವೆಲ್ಲದರ ಕುರಿತು ಸಂಸತ್ತಿನಲ್ಲಿ ಮಾತನಾಡುತ್ತೇನೆ ಎಂದು ರಾಹುಲ್ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಹೆಚ್ಚಾಗುತ್ತಿದ್ದು, ಈ ಸಂಬಂಧ ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸಿವೆ.

ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಸೋಮವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಆರು ಮಂದಿ ಗಾಯಗೊಂಡಿದ್ದರು.

ಈ ಮುನ್ನ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ 6 ಉಗ್ರರು ಹತ್ಯೆಯಾಗಿದ್ದರು. ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT