ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ಪ್ರತಿಷ್ಠಾಪನೆಗೆ ಇಡೀ ಜಗತ್ತು ಕಾತರದಿಂದ ಕಾಯುತ್ತಿದೆ: ಪ್ರಧಾನಿ ಮೋದಿ

Published 30 ಡಿಸೆಂಬರ್ 2023, 11:00 IST
Last Updated 30 ಡಿಸೆಂಬರ್ 2023, 11:00 IST
ಅಕ್ಷರ ಗಾತ್ರ

ಅಯೋಧ್ಯೆ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕಾಗಿ ಇಡೀ ಜಗತ್ತು ಕಾತರದಿಂದ ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಅವರು ಐತಿಹಾಸಿಕ ದಿನವನ್ನು ಕಣ್ತುಂಬಿಕೊಳ್ಳಲು ಅಯೋಧ್ಯೆಗೆ ಆಗಮಿಸಬೇಕು ಎಂದು ಅವರು ತಿಳಿಸಿದರು.

ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೋದಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅಭಿವೃದ್ಧಿ ಮತ್ತು ಪರಂಪರೆಯ ಶಕ್ತಿಯು ದೇಶವನ್ನು ಮುನ್ನಡೆಸುತ್ತದೆ’ ಎಂದರು.

ಜನವರಿ 22 ರಂದು ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭ ಕಾರ್ಯಕ್ರಮಕ್ಕೆ ಸಾರ್ವಜನಿಕರು ಅಯೋಧ್ಯೆ ನಗರಕ್ಕೆ ಬಾರದಂತೆ ಪ್ರಧಾನಿ ಮೋದಿ ಮನವಿ ಮಾಡಿದರು. ಎಲ್ಲಾ ನಾಗರಿಕರು ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸಬೇಕು. ಇದರಿಂದ ಇಡೀ ದೇಶವು ವೈಭವದಿಂದ ಕೂಡಿರುತ್ತದೆ ಎಂದು ಅವರು ಹೇಳಿದರು.

ಜನವರಿ 14ರಿಂದ 22ರವರೆಗೆ ದೇಶದಾದ್ಯಂತ ಯಾತ್ರಾ ಸ್ಥಳಗಳು ಹಾಗೂ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸುವಂತೆ ಮೋದಿ ಸಾರ್ವಜನಿಕರನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT