ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭವಾನಿ ರೇವಣ್ಣ ಜಾಮೀನು ಅರ್ಜಿ: ಪ್ರಾಸಿಕ್ಯೂಷನ್‌ಗೆ ನೋಟಿಸ್‌

Published 28 ಮೇ 2024, 1:29 IST
Last Updated 28 ಮೇ 2024, 1:29 IST
ಅಕ್ಷರ ಗಾತ್ರ

ಬೆಂಗಳೂರು: ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಸಂಬಂಧ ಪ್ರಜ್ವಲ್ ರೇವಣ್ಣ ಅವರ ತಾಯಿಯೂ ಆದ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಸೋಮವಾರ ವಿಚಾರಣೆ ನಡೆಸಿದರು.

‘ಮಧ್ಯಂತರ ಮತ್ತು ನಿಗದಿತ (ರೆಗ್ಯುಲರ್) ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ’ ಎಂದು ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮಂಗಳವಾರಕ್ಕೆ (ಮೇ 28) ಮುಂದೂಡಿದ್ದಾರೆ.

ಪ್ರಕರಣವೇನು?: ‘ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 364ಎ, 365 ಮತ್ತು 34 ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಭವಾನಿಯವರ ಪತಿ ಎಚ್‌.ಡಿ.ರೇವಣ್ಣ ಮೊದಲ ಆರೋಪಿಯಾಗಿದ್ದರೆ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಭವಾನಿ ಅವರು ಜಾಮೀನು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT