ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cauvery | 'ಕಾವೇರಿ'ದ ಪ್ರತಿಭಟನೆ: ಮಂಡ್ಯ ಮದ್ದೂರು ಬಂದ್‌ಗೆ ವ್ಯಾಪಕ ಬೆಂಬಲ

Published 23 ಸೆಪ್ಟೆಂಬರ್ 2023, 4:54 IST
Last Updated 23 ಸೆಪ್ಟೆಂಬರ್ 2023, 4:54 IST
ಅಕ್ಷರ ಗಾತ್ರ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣಾ ಸಮಿತಿ ಶನಿವಾರ ಕರೆ ನೀಡಿದ್ದ‌ ಮಂಡ್ಯ, ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ನಗರ ಹಾಗೂ ಮದ್ದೂರು ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ್ದು ವಾಣಿಜ್ಯ ಚಟುವಟಿಕೆ ಸಂಪೂರ್ಣ ಸ್ತಬ್ಧಗೊಂಡಿದೆ. ಆಟೊ, ಖಾಸಗಿ, ಸಾರಿಗೆ ಸಂಸ್ಥೆ ಬಸ್ ಗಳು ರಸ್ತೆಗೆ ಇಳಿದಿಲ್ಲ. ಶಾಲಾ ಕಾಲೇಜು, ಚಿತ್ರಮಂದಿರಗಳು ಬಂದ್ ಆಗಿವೆ. ನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿವೆ. ವಾಹನ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ.

ವಿವಿಧ ಸಂಘಟನೆಗಳ ಸದಸ್ಯರು ಬೈಕ್ ರ್ಯಾಲಿ ನಡೆಸಿ‌ ಕಾವೇರಿ ಜಾಗೃತಿ ಕರಪತ್ರ ಹಂಚಿದರು.

ರಸ್ತೆಯಲ್ಲಿ ಮಲಗಿ ಆಕ್ರೋಶ; ಜೆ.ಸಿ ವೃತ್ತದಲ್ಲಿ ರೈತ ಮುಖಂಡರು ಮಲಗಿ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ತಮಿಳುನಾಡಿನ ಹರಿಯುತ್ತಿರುವ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT