ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.
ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ಪಿ.ಎಂ.ನರೇಂದ್ರ ಸ್ವಾಮಿ, ಸಿ.ಎಸ್.ಪುಟ್ಟರಂಗಶೆಟ್ಟಿ, ಎಚ್.ಎಂ. ಗಣೇಶ್ ಪ್ರಸಾದ್ ಪಾಲ್ಗೊಂಡಿದ್ದರು