ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

Published : 24 ಜುಲೈ 2024, 12:42 IST
Last Updated : 24 ಜುಲೈ 2024, 12:42 IST
ಫಾಲೋ ಮಾಡಿ
Comments

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್, ‘ನಮ್ಮ ಶಾಲೆಯಲ್ಲಿ ಓದುತ್ತಿದ್ದ ದರ್ಶನ್– ವಿಜಯಲಕ್ಷ್ಮಿ ದಂಪತಿಯ ಪುತ್ರ ಕಾರಣಾಂತರಗಳಿಂದ ಶಾಲೆ ತೊರೆದಿದ್ದರು. ಈಗ ಮತ್ತೆ ಸೇರಿಸಿಕೊಳ್ಳುವಂತೆ ಮನವಿ ಮಾಡಲು ಬಂದಿದ್ದರು. ನಮ್ಮ ಶಾಲೆಯ ಪಕ್ಕದಲ್ಲೇ ವಿಜಯಲಕ್ಷ್ಮಿ ಅವರ ಮನೆಯಿದೆ. ‌ಪ್ರಾಂಶುಪಾಲರನ್ನು ಭೇಟಿ ಮಾಡುವಂತೆ ಅವರಿಗೆ ಹೇಳಿದ್ದೇನೆ’ ಎಂದರು

ಹಸ್ತಕ್ಷೇಪ ಮಾಡುವುದಿಲ್ಲ: ‘ನಟ ದರ್ಶನ್‌ಗೆ ಅನ್ಯಾಯ ಆಗಿದ್ದರೆ ನ್ಯಾಯ ಕೊಡಿಸಲಾಗುವುದು’ ಎಂದು ರಾಮನಗರದಲ್ಲಿ ಮಂಗಳವಾರ ನೀಡಿದ್ದ ಹೇಳಿಕೆಯ ಬಗ್ಗೆ ಕೇಳಿದಾಗ, ‘ಚಾಮುಂಡೇಶ್ವರಿ ಕರಗ ಸಮಾರಂಭದಲ್ಲಿ ನೆರೆದಿದ್ದ ಯುವಕರು ದರ್ಶನ್ ಮೇಲಿನ ಅಭಿಮಾನದಿಂದ ನ್ಯಾಯ ಕೊಡಿಸಿ ಎಂದು ಗಲಾಟೆ ಮಾಡುತ್ತಿದ್ದರು. ಬಾಸ್, ಬಾಸ್ ಎಂದು ಕೂಗುತ್ತಿದ್ದರು. ಯಾರಪ್ಪ ಬಾಸ್ ಎಂದು ನೋಡಿದಾಗ ದರ್ಶನ್ ಫೋಟೊ ಹಿಡಿದುಕೊಂಡಿದ್ದರು. ಆಗ ಅವರ ಸಮಾಧಾನಕ್ಕೆ ನ್ಯಾಯ ಕೊಡಿಸೋಣ ಎಂದು ಹೇಳಿದೆ’ ಎಂದರು.

‘ರಾಮನಗರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿದ್ದಾಗ ವಿಜಯಲಕ್ಷ್ಮಿ ನನ್ನನ್ನು ಭೇಟಿ ಮಾಡಲು ಬಂದಿದ್ದರು. ಮನೆಗೆ ಬಂದು ಭೇಟಿ ಮಾಡುವಂತೆ ಸಮಯಾವಕಾಶ ನೀಡಿದ್ದೆ. ಬಹುಶಃ ದರ್ಶನ್ ಪ್ರಕರಣದ ವಿಚಾರವಾಗಿ ಮಾತನಾಡಲು ಬರುತ್ತಾರೆ ಎಂದು ನಾನು ಭಾವಿಸಿದ್ದೆ’ ಎಂದರು.

‘ನಟ ದರ್ಶನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೊಲೀಸ್ ವಿಚಾರಣೆ, ನ್ಯಾಯ ಪ್ರಕ್ರಿಯೆಯಲ್ಲಿ ನಾವು ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಎಲ್ಲರೂ ಒಂದೇ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT