ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಫರ್‌ ವಲಯದಲ್ಲಿ ಲೇಔಟ್: ಕಠಿಣ ಕ್ರಮ ಎಂದ ಕೆ.ಜೆ.ಜಾರ್ಜ್

Published 8 ಜನವರಿ 2024, 20:55 IST
Last Updated 8 ಜನವರಿ 2024, 20:55 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಹುಲಿ ಸಂರಕ್ಷಿತ ಪ್ರದೇಶ ಮತ್ತು ಆನೆಕಾರಿಡಾರ್‌ನ ಬಫರ್ ವಲಯದಲ್ಲಿ ಲೇಔಟ್ ನಿರ್ಮಿಸು ತ್ತಿರುವುದನ್ನುಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ತರೀಕೆರೆಯಲ್ಲಿ ಮಾತನಾಡಿದ ಅವರು, ‘ಲೇಔಟ್ ನಿರ್ಮಾಣವಾಗುತ್ತಿರುವುದು ಗಮನಕ್ಕೆ ಬಂದಿತ್ತು. ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೆ.ಈಗ ಅವರು ನೋಟಿಸ್ ನೀಡಿದ್ದಾರೆ, ಮುಂದಿನ ಪ್ರಕ್ರಿಯೆಗಳು ನಡೆಯಲಿವೆ’ ಎಂದರು.

‘ಹುಲಿ ಸಂರಕ್ಷಿತ ಪ್ರದೇಶ ಮಾತ್ರವಲ್ಲ, ಭೂಸುಧಾರಣ ಕಾಯ್ದೆಯನ್ನೂ ಉಲ್ಲಂಘಿಸಲಾಗಿದೆ. ಕಂದಾಯ ಮತ್ತು ಅರಣ್ಯ ಸಚಿವರೊಂದಿಗೂ ಈ ಬಗ್ಗೆ ಚರ್ಚೆ ನಡೆಸಿದ್ದೇನೆ’ ಮಾಹಿತಿ ನೀಡಿದರು.

ಯಾವುದೇ ಕಾರಣಕ್ಕೂ ಪರಿಸರ ಹಾನಿಗೆ ಅವಕಾಶ ನೀಡುವುದಿಲ್ಲ. ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT