ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಅಕ್ರಮ: ತನಿಖೆಗೆ ಏಕ ಸದಸ್ಯ ಆಯೋಗ ರಚನೆ

Published : 14 ಜುಲೈ 2024, 21:33 IST
Last Updated : 14 ಜುಲೈ 2024, 21:33 IST
ಫಾಲೋ ಮಾಡಿ
Comments

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌. ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರವು ಭಾನುವಾರ ಆದೇಶ ಹೊರಡಿಸಿದೆ.

ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಆರು ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ. 

ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು, ತಾಂತ್ರಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೀಡಲು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ. 

ಆಯೋಗವು ವಿಚಾರಣೆಗೆ ಬಯಸುವ ಎಲ್ಲ ಕಡತಗಳು ಮತ್ತು ದಾಖಲಾತಿಗಳನ್ನು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒದಗಿಸಬೇಕು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು ಸಂಪೂರ್ಣವಾಗಿ ಸಹಕರಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT