ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಬಗ್ಗೆ ಹೇಳಿಕೆ: ಸಚಿವ ಶಿವಾನಂದ ಪಾಟೀಲ ವಜಾಕ್ಕೆ ಆರ್.ಅಶೋಕ ಒತ್ತಾಯ

Published 25 ಡಿಸೆಂಬರ್ 2023, 10:52 IST
Last Updated 25 ಡಿಸೆಂಬರ್ 2023, 10:52 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ರೈತರ ಬಗ್ಗೆ ಹಗುರವಾಗಿ ಮಾತನಾಡಿರುವ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು.

‘ಬರಗಾಲ ಬರಲಿ ಎಂದು ರೈತರು ಕಾಯುತ್ತಾರೆ ಎಂದು ಶಿವಾನಂದ ಪಾಟೀಲ ಅವರು ಹೇಳಿದ್ದಾರೆ. ಹಿಂದೆ ಕೂಡ ರೈತರ ಆತ್ಮಹತ್ಯೆ ಬಗ್ಗೆ ಹಗುರವಾಗಿ ಮಾತನಾಡಿದ್ದರು. ರೈತರ ಬಗ್ಗೆ ಅವಹೇಳನ ಸರಿಯಲ್ಲ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಇದೊಂದು ಕೆಟ್ಟ ಸರ್ಕಾರ, ರೈತ ವಿರೋಧ ಸರ್ಕಾರ ಎಂಬುದಕ್ಕೆ ಇದು ಉದಾಹರಣೆ. ಸರ್ಕಾರಕ್ಕೆ ನಾಚಿಕೆಯಾಗಬೇಕು, ರೈತರನ್ನು ಕಡೆಗಣಿಸಿದರೆ ಅವರ ಶಾಪಕ್ಕೆ ಸರ್ಕಾರ ಗುರಿಯಾಗಲಿದೆ ಎಂದರು.

ಈ ರೀತಿ ಹಗುರವಾಗಿ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಮುಖ್ಯಮಂತ್ರಿ ಏನು ಕ್ರಮ ಕೈಗೊಂಡಿದ್ದಾರೆ? ಕೂಡಲೇ ಇವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಇದಕ್ಕೂ ಮುನ್ನ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಭೇಟಿ ನೀಡಿದ ಆರ್.ಅಶೋಕ್ ಅವರು ದತ್ತ ಪಾದುಕೆ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT