ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ | ಶೀಘ್ರದಲ್ಲೇ ಆರೋಪ ಪಟ್ಟಿ ಸಲ್ಲಿಕೆ: ಬಿ. ದಯಾನಂದ

Published : 23 ಆಗಸ್ಟ್ 2024, 7:24 IST
Last Updated : 23 ಆಗಸ್ಟ್ 2024, 7:24 IST
ಫಾಲೋ ಮಾಡಿ
Comments

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆಯು ಅಂತಿಮ ಹಂತ ತಲುಪಿದ್ದು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.

ತಮ್ಮ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ಎಲ್ಲ ವರದಿಗಳೂ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರ ಕೈಸೇರಿವೆ. ಹೈದರಾಬಾದ್‌ನಿಂದ ಎಫ್ಎಸ್‌ಎಲ್ ವರದಿಗಳು ಬರುವುದು ಬಾಕಿಯಿದ್ದು ಇಂದು ಸಂಜೆ ಅಥವಾ‌ ನಾಳೆ ವರದಿಗಳು ಬರಲಿವೆ ಎಂದು ಹೇಳಿದರು.

ಕೊಲೆ ಮಾಡಿದ್ದ ಆರೋಪದಡಿ ನಟ ದರ್ಶನ್ ಅವರು ಪರಪ್ಪ‌ನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು ಅವರನ್ನು ನಟ ಚಿಕ್ಕಣ್ಣ ಭೇಟಿಯಾಗಿರುವ ಮಾಹಿತಿಯಿದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಜೂನ್ 8ರಂದು ಕೃತ್ಯ ನಡೆಯುವುದಕ್ಕೂ ಮೊದಲು ಸ್ಟೋನಿ‌ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ನಟ ಚಿಕ್ಕಣ್ಣ ಅವರು ದರ್ಶನ್ ಜೊತೆಗೆ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಅವರಿಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಿದ್ದರು. ನಂತರ ಅವರನ್ನು ಸಾಕ್ಷಿಧಾರರನ್ನಾಗಿ ಮಾಡಿ ನ್ಯಾಯಾಧೀಶರ ಎದುರು 164ರ‌ ಅಡಿ ಹೇಳಿಕೆ ದಾಖಲಿಸಿದ್ದರು. ಹೀಗಾಗಿ ಕೊಲೆ ಆರೋಪಿಯನ್ನು ಚಿಕ್ಕಣ್ಣ ಭೇಟಿಯಾಗಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT