ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನ | ಗುಂಡಿನ ದಾಳಿ: 6 ಕಾರ್ಮಿಕರು ಸಾವು

Published 22 ಡಿಸೆಂಬರ್ 2023, 9:46 IST
Last Updated 22 ಡಿಸೆಂಬರ್ 2023, 9:46 IST
ಅಕ್ಷರ ಗಾತ್ರ

ಪೇಶಾವರ: ಪೊಲೀಸ್ ಠಾಣೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಆರು ಮಂದಿ ಕಾರ್ಮಿಕರನ್ನು ಅಪರಿಚಿತ ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ವಜಿರಿಸ್ತಾನದ ಬುಡಕಟ್ಟು ಜಿಲ್ಲೆಯ ವಾನಾದಲ್ಲಿ ಕಾರ್ಮಿಕರು ತಮ್ಮ ಟೆಂಟ್‌ಗಳಲ್ಲಿದ್ದಾಗ ಅಪರಿಚಿತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ಅಧಿಕಾರಿ ಘಟನೆಯನ್ನು ದೃಢಪಡಿಸಿದ್ದಾರೆ. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಯಾವುದೇ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಕಾರ್ಮಿಕರ ಹತ್ಯೆಯನ್ನು ನಿವೃತ್ತ ನ್ಯಾಯಮೂರ್ತಿ ಅರ್ಷದ್ ಹುಸೇನ್ ತೀವ್ರವಾಗಿ ಖಂಡಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಇದೇ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ 11 ಕಾರ್ಮಿಕರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT