ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಂಡೊನೇಷ್ಯಾದಲ್ಲಿ ಭೂಕುಸಿತ: 14 ಮಂದಿ ಸಾವು

Published 14 ಏಪ್ರಿಲ್ 2024, 14:40 IST
Last Updated 14 ಏಪ್ರಿಲ್ 2024, 14:40 IST
ಅಕ್ಷರ ಗಾತ್ರ

ತಾನಾ ತೊರಾಜ (ಇಂಡೊನೇಷ್ಯಾ): ಇಲ್ಲಿನ ಸುಲವೆಸಿ ದ್ವೀಪದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ 3 ವರ್ಷದ ಬಾಲಕಿ ಸೇರಿಂತೆ 14 ಜನರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ಧಾರಾಕಾರ ಮಳೆಯ ಕಾರಣ ಬೆಟ್ಟ, ಗುಡ್ಡಗಳಿಂದ ಮಣ್ಣು ಕುಸಿದು ನಾಲ್ಕು ಮನೆಗಳು ಹಾನಿಯಾಗಿವೆ. ಸೈನಿಕರು, ಪೊಲೀಸರು ಮತ್ತು ಸ್ವಯಂ ಸೇವಕರು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, 8 ವರ್ಷದ ಬಾಲಕಿ ಸೇರಿದಂತೆ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಪತ್ತೆಯಾಗಿರುವವರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT