ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Dawood Ibrahim | ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಶಂಕೆ, ಆಸ್ಪತ್ರೆಗೆ ದಾಖಲು

Published 18 ಡಿಸೆಂಬರ್ 2023, 4:36 IST
Last Updated 18 ಡಿಸೆಂಬರ್ 2023, 4:36 IST
ಅಕ್ಷರ ಗಾತ್ರ

ಬೆಂಗಳೂರು: 1993ರ ಮುಂಬೈ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾನೆ ಎಂದು ತಿಳಿದುಬಂದಿದೆ.

ದಾವೂದ್‌ಗೆ ವಿಷಪ್ರಾಶನ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದ್ದು, ಈ ಬಗ್ಗೆ ಆಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

2 ದಿನಗಳ ಹಿಂದೆ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯ ಒಳಗೂ ಹೊರಗೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಡೀ ಮಹಡಿಯಲ್ಲಿ ದಾವೂದ್ ಮಾತ್ರ ಇದ್ದು, ಆಸ್ಪತ್ರೆಯ ಉನ್ನತ ಅಧಿಕಾರಿಗಳು ಹಾಗೂ ಆತನ ಕುಟುಂಬಸ್ಥರಿಗೆ ಮತ್ತು ಆಪ್ತರಿಗೆ ಮಾತ್ರ ಪ್ರವೇಶಕ್ಕೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಾವೂದ್ ಆಸ್ಪತ್ರೆಗೆ ಸೇರಿರುವ ಬಗ್ಗೆ ಆತನ ಸಂಬಂಧಿಕರಾದ ಅಲಿಶಾ ಪರ್ಕರ್‌ ಹಾಗೂ ಸಜಿದ್ ವಾಗ್ಲೆ ಅವರಿಂದ ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ‘ಇಂಡಿಯಾ ಟುಡೆ‘ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT