ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದೇ ವೇಳೆ ಪೆನ್ಸಿಲ್ವೇನಿಯಾದ ಗವರ್ನರ್ ಜೋಶ್ ಶಪಿರೊ ಮತ್ತು ಬಟ್ಲರ್ ಮೇಯರ್ ಬಾಬ್ ಡ್ಯಾಂಡೋಯ್ ಅವರೊಂದಿಗೆ ಮಾತನಾಡಿದ್ದು, ಗುಂಡಿನ ದಾಳಿಗೆ ಸಂಬಂಧಿಸಿ ಮಾಹಿತಿ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್ ಮತ್ತು ಜೋ ಬೈಡನ್ ನಡುವಿನ ಮಾತುಕತೆ ವಿವರವನ್ನು ಹಂಚಿಕೊಳ್ಳಲು ಶ್ವೇತಭವನ ನಿರಾಕರಿಸಿದೆ.
According to White House Official, President Joe Biden spoke with former President Donald Trump. The President also spoke to Pennsylvania Governor Josh Shapiro and Butler Mayor Bob Dandoy. Tonight (EST), the President is returning to Washington DC. Tomorrow morning (EST) at the…
— ANI (@ANI) July 14, 2024
‘ಟ್ರಂಪ್ ಮೇಲಿನ ಗುಂಡಿನ ದಾಳಿ ಪ್ರಕರಣದ ಸೂಕ್ಷ್ಮತೆಯ ಕಾರಣದಿಂದಾಗಿ ಜೋ ಬೈಡನ್ ಪರ ಟಿವಿ ಮಾಧ್ಯಮಗಳಲ್ಲಿ ನೀಡಲಾಗಿದ್ದ ಜಾಹೀರಾತುಗಳ ಪ್ರಸಾರವನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದೆ’ ಎಂದು ಹೆಸರು ಹೇಳಲು ಇಚ್ಛಿಸದ ಬೈಡನ್ ಚುನಾವಣಾ ಪ್ರಚಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಅವರು ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ 78 ವರ್ಷದ ಟ್ರಂಪ್ ಅವರಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನವೆಂಬರ್ 5ರಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಜೋ ಬೈಡನ್ ಕಣದಲ್ಲಿದ್ದಾರೆ. ಇತ್ತ ರಿಪಬ್ಲಿಕನ್ ಪಕ್ಷದ ಪ್ರತಿಸ್ಪರ್ಧಿಯಾಗಿ ಡೊನಾಲ್ಡ್ ಟ್ರಂಪ್ ಕಣಕ್ಕಿಳಿದಿದ್ದಾರೆ.
ಈಚೆಗೆ ಡೊನಾಲ್ಡ್ ಟ್ರಂಪ್ ನಡುವಣ ಮುಖಾಮುಖಿ ಚರ್ಚೆಯಲ್ಲಿ ಬೈಡನ್ ಹಿನ್ನಡೆ ಅನುಭವಿಸಿದ್ದರು. ಇದರಿಂದ ಡೆಮಾಕ್ರಟಿಕ್ ಪಕ್ಷದಲ್ಲೇ ಭಿನ್ನಾಭಿಪ್ರಾಯ ಉಂಟಾಗಿತ್ತು. ಬೈಡನ್ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಮೂಲಕ ಕಿರಿಯ ಅಭ್ಯರ್ಥಿಗೆ ಅವಕಾಶ ನೀಡಬೇಕು ಎಂಬ ಮಾತುಗಳು ಕೇಳಿಬಂದಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.