ವಾಷಿಂಗ್ಟನ್: ಇರಾನಿಯನ್ನರ ಬಳಿ ಕೇವಲ ಮಾತುಕತೆ ಬಿಟ್ಟು, ಬೇರೆ ಯಾವುದೇ ಪರಿಣಾಮಕಾರಿ ಅಸ್ತ್ರಗಳಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಲೇವಡಿ ಮಾಡಿದ್ದಾರೆ.

‘ಅಂತರರಾಷ್ಟ್ರೀಯ ಜಲಮಾರ್ಗಗಳನ್ನು ಬಳಸಿಕೊಂಡು ಜಗತ್ತನ್ನು ಅಲ್ಪಾವಧಿಗೆ ಬೆದರಿಸುವುದನ್ನು ಹೊರತುಪಡಿಸಿ, ತಮ್ಮ ಬಳಿ ಯಾವುದೇ ಅಸ್ತ್ರಗಳಿಲ್ಲ ಎಂಬುದು ಇರಾನಿಯನ್ನರಿಗೆ ಅರ್ಥವಾಗುತ್ತಿಲ್ಲ. ಅವರು (ಇರಾನಿಯನ್ನರ) ಇಂದು ಬದುಕಿರುವುದಕ್ಕೆ ಏಕೈಕ ಕಾರಣವೇ ಕದನ ವಿರಾಮ ಕುರಿತು ಮಾತುಕತೆ ನಡೆಸುವುದಾಗಿದೆ’ ಎಂದು ಟ್ರಂಪ್ ತಮ್ಮ ಒಡೆತನದ ಸಾಮಾಜಿಕ ಮಾಧ್ಯಮ ‘ಟ್ರೂಥ್ ಸೋಷಿಯಲ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇರಾನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸಲು ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇತ್ತ ಇರಾನ್ನ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಖಿರ್ ಖಾಲೀಬಾಫ್ ನೇತೃತ್ವದ ನಿಯೋಗವು ಇಸ್ಲಾಮಾಬಾದ್ಗೆ ಬಂದಿಳಿದಿದೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ನಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.