ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಇಸ್ರೇಲ್ ಪರಮಾಣು ಅಸ್ತ್ರ ಬಳಸುತ್ತದೆ ಎಂಬ ಆತಂಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿಹಾಕಿದ್ದಾರೆ.

ಸಿಎನ್ಎನ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಇಸ್ರೇಲ್ ಎಂದಿಗೂ ಪರಮಾಣು ಶಸ್ತ್ರ ಬಳಸುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಶ್ವೇತಭವನದಲ್ಲಿ ಮಾತನಾಡಿದ ಅವರು ಯುದ್ಧ ವಿಸ್ತರಣೆಯಾಗುವ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತಡಿಸಿದರು. ಅಮೆರಿಕ ಮತ್ತು ಇಸ್ರೇಲ್ ಸೇನೆಗಳ ನಡುವೆ ಉತ್ತಮ ಸಂಯೋಜನೆ ಇದೆ. ಆದರೆ ಎರಡು ದೇಶಗಳ ಗುರಿಗಳು ಸಂಪೂರ್ಣ ಒಂದೇ ಆಗಿರಬೇಕೆಂದಿಲ್ಲ ಎಂದು ಹೇಳಿದರು.

ಈ ನಡುವೆ, ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ಇರಾನ್ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು ಎಂದು ಮಾಜಿ ಅಧ್ಯಕ್ಷರೊಬ್ಬರು ತಮ್ಮೊಂದಿಗೆ ಹೇಳಿಕೊಂಡಿದ್ದಾರೆ ಎಂದು ಟ್ರಂಪ್ ತಿಳಿಸಿದ್ದಾರೆ. ಆದರೆ ಆ ನಾಯಕನ ಹೆಸರು ಹೇಳಲು ಅವರು ನಿರಾಕರಿಸಿದರು.

ನನಗೆ ಇಷ್ಟವಾದ ಮಾಜಿ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ. ಅವರು ನನ್ನ ಅವಧಿಯಲ್ಲಿ ಇರಾನ್ ವಿರುದ್ಧ ಕ್ರಮಕೈಗೊಳ್ಳಬೇಕಿತ್ತು ಎಂದಿದ್ದರು. ಆದರೆ ಅವರು ಅದನ್ನು ಮಾಡಲಿಲ್ಲ. ನಾನು ಈಗ ಮಾಡುತ್ತಿದ್ದೇನೆ ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು.

ಇರಾನ್ ವಿರುದ್ಧ ಅಮೆರಿಕ ಕೈಗೊಂಡಿರುವ ಸೈನಿಕ ಕ್ರಮಗಳನ್ನು ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. ಆದರೆ ಸರ್ಕಾರದ ನಡೆಯಿಂದಾಗಿ ದೇಶ ಮತ್ತು ಜಾಗತಿಕವಾಗಿ ಇಂಧನ ದರಗಳ ಏರಿಕೆಗೆ ಕಾರಣವಾಗುತ್ತಿದೆ ಎಂದು ರಿಪಬ್ಲಿಕನ್ ಪಕ್ಷ ಟೀಕೆ ಮಾಡಿದೆ.
.ಹೊರ್ಮುಜ್ ನಿಯಂತ್ರಿಸಲು ಒಕ್ಕೂಟ ರಚನೆ: ಡೊನಾಲ್ಡ್ ಟ್ರಂಪ್ ಒತ್ತಾಯ.ಹೋರ್ಮುಜ್ ಜಲಸಂಧಿಯತ್ತ ದಿಟ್ಟ ಹೆಜ್ಜೆ ಇಟ್ಟಿದ್ದೇವೆ ಎಂದ ಡೊನಾಲ್ಡ್ ಟ್ರಂಪ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.