ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND Vs ENG Test | ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ‌

Published 2 ಫೆಬ್ರುವರಿ 2024, 10:27 IST
Last Updated 2 ಫೆಬ್ರುವರಿ 2024, 10:27 IST
ಅಕ್ಷರ ಗಾತ್ರ

ವಿಶಾಖಪಟ್ಟಣ: ಇಲ್ಲಿನ ಡಾ. ವೈ.ಎಸ್‌. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತದ ಬ್ಯಾಟರ್‌ ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ ಬಾರಿಸಿದ್ದಾರೆ.

ತಾಜಾ ವರದಿಯ ವೇಳೆಗೆ 232 ಎಸೆತಗಳಲ್ಲಿ 160 ರನ್‌ ಸಿಡಿಸಿ ಬ್ಯಾಟಿಂಗ್‌ ನಡೆಸುತ್ತಿದ್ದಾರೆ. ಅವರ ಈ ಇನಿಂಗ್ಸ್‌ನಲ್ಲಿ 4 ಸಿಕ್ಸರ್‌ ಹಾಗೂ 17 ಬೌಂಡರಿ ಸೇರಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಇದು ಅವರ ಎರಡನೇ ಶತಕ.

ಕಳೆದ ವರ್ಷ ವೆಸ್ಟ್‌ ಇಂಡೀಸ್‌ ವಿರುದ್ಧ ಆಡಿದ ತಮ್ಮ ಮೊದಲ ಪಂದ್ಯದಲ್ಲೇ ಜೈಸ್ವಾಲ್ ಶತಕ ಸಿಡಿಸಿದ್ದರು.

ವೇಗಿಗಳು ಹಾಗೂ ಸ್ಪಿನ್ನರ್‌ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಅವರು, ಸರಾಗವಾಗಿ ಬ್ಯಾಟ್‌ ಬೀಸಿದರು. ಟಾಮ್‌ ಹಾರ್ಟ್ಲಿ ಅವರ ಎಸೆತಕ್ಕೆ ಮುನ್ನುಗ್ಗಿ ಸಿಕ್ಸರ್‌ ಬಾರಿಸಿ ಶತಕದ ಸಂಭ್ರಮ ಆಚರಿಸಿದರು.

ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ 40 ರನ್‌ ಆಗುವಷ್ಟರಲ್ಲಿ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್‌ ಕಳೆದುಕೊಂಡಿತು. ಶುಭಮನ್ ಗಿಲ್ 34ರನ್‌, ಶ್ರೇಯಸ್ ಅಯ್ಯರ್‌ 27 ಹಾಗೂ ರಜತ್ ಪಾಟೀದಾರ್‌ 32 ರನ್ ಗಳಿಸಿ ಪೆವಿಲಿಯನ್ ಸೇರಿದ್ದಾರೆ.

ಅಕ್ಸರ್‌ ಪಟೇಲ್ ಅವರು ಯುವ ಬ್ಯಾಟರ್‌ಗೆ ಸಾಥ್‌ ನೀಡುತ್ತಿದ್ದಾರೆ. 80 ಓವರ್‌ಗಳ ಅಂತ್ಯಕ್ಕೆ ಭಾರತ ತಂಡವು 4 ವಿಕೆಟ್‌ಗಳನ್ನು ಕಳೆದುಕೊಂಡು 287 ರನ್ ಪೇರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT