ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಒಂದೇ ಓವರ್​ನಲ್ಲಿ ಶರವೇಗದ 4 ಸಿಕ್ಸರ್ ಸಿಡಿಸಿದ ಸೂರ್ಯ, ದಂಗಾದ ಕ್ಯಾಮರಾನ್

Published 25 ಸೆಪ್ಟೆಂಬರ್ 2023, 5:38 IST
Last Updated 25 ಸೆಪ್ಟೆಂಬರ್ 2023, 5:38 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವಕಪ್‌ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾ ಇತರೆ ತಂಡಗಳಿಗೆ ಎಚ್ಚರಿಕೆ ನೀಡಿದೆ.

ಇಂದೋರ್‌ನ ಹೋಳ್ಕರ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು 99 ರನ್‌ಗಳಿಂದ ಗೆಲುವು ಸಾಧಿಸಿತು. ಇದರೊಂದಿಗೆ ಮೂರು ಏಕದಿನ ಪಂದ್ಯಗಳ ಸರಣಿಯನ್ನು 2–0 ಅಂತರದಿಂದ ಕೈವಶ ಮಾಡಿಕೊಂಡಿತು.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 399 ರನ್ ಗಳಿಸಿತ್ತು. ಮಳೆ ಸುರಿದ ಕಾರಣ ಡಕ್ವರ್ಥ್ ಲೂಯಿಸ್ ನಿಯಮದನ್ವಯ ಗುರಿಯನ್ನು ಪರಿಷ್ಕರಿಸಲಾಯಿತು. 33 ಓವರ್‌ಗಳಲ್ಲಿ 317 ರನ್‌ಗಳ ಗುರಿ ನಿಗದಿ ಮಾಡಲಾಯಿತು. ಆದರೆ, ಭಾರತದ ಬೌಲರ್‌ಗಳ ದಾಳಿಯ ಮುಂದೆ ಆಸ್ಟ್ರೇಲಿಯಾ ತಂಡವು 28.2 ಓವರ್‌ಗಳಲ್ಲಿ 217 ರನ್‌ ಗಳಿಸಿ ಆಲೌಟ್ ಆಯಿತು.

ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಭಾರತದ ಆಟಗಾರರು 2 ಶತಕ ಹಾಗೂ 2 ಸ್ಫೋಟಕ ಅರ್ಧಶತಕ ದಾಖಲಿಸಿದರು. ವಿಶೇಷವೆಂದರೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಸೂರ್ಯಕುಮಾರ್ ಎಲ್ಲ ಬೌಲರ್‌ಗಳನ್ನೂ ದಂಡಿಸಿದರು. ಕೇವಲ 24 ಎಸೆತಗಳಲ್ಲಿ ಅರ್ಧತತಕ ದಾಖಲಿಸಿದರು. ಅಜೇಯ 72 ಗಳಿಸಿದರು. ಆಸೀಸ್ ವೇಗಿ ಕ್ಯಾಮೆರಾನ್ ಗ್ರೀನ್ ಅವರ ಒಂದೇ ಓವರ್‌ನಲ್ಲಿ ಸತತ 4 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದರು. ಅವರು ಒಟ್ಟು ಆರು ಸಿಕ್ಸರ್ ಹಾಗೂ ಆರು ಬೌಂಡರಿಗಳನ್ನು ಸಿಡಿಸಿದರು.

ಸೂರ್ಯ ಶರವೇಗದಲ್ಲಿ ಸಿಕ್ಸರ್‌ಗಳನ್ನು ಹೊಡೆದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT