ಗುರುವಾರ , ಅಕ್ಟೋಬರ್ 17, 2019
26 °C

ಪ್ರಸನ್ನ ಉಪವಾಸ ಅಂತ್ಯ ಇಂದು?

Published:
Updated:

ಬೆಂಗಳೂರು: ಪವಿತ್ರ ಆರ್ಥಿಕತೆಗೆ ಆಗ್ರಹಿಸಿ ರಂಗಕರ್ಮಿ ಪ್ರಸನ್ನ ಅವರು ಐದು ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಶುಕ್ರವಾರ ಅಂತ್ಯಗೊಳ್ಳುವ ಸಾಧ್ಯತೆ ಇದೆ.

ಪ್ರಸನ್ನ ಅವರನ್ನು ಭೇಟಿ ಮಾಡಿದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು, ‘ಕೇಂದ್ರ ಹಣಕಾಸು ಸಚಿವರೊಂದಿಗೆ ಈ ಸಂಬಂಧ ಮಾತುಕತೆ ನಡೆಸಲಾಗುವುದು’ ಎಂದು ಭರವಸೆ ನೀಡಿದರು.

ಶುಕ್ರವಾರ ಬೆಳಿಗ್ಗೆ 10ಕ್ಕೆ ಗ್ರಾಮ ಸೇವಾ ಸಂಘದ ಸಭೆ ನಡೆಯಲಿದ್ದು, ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸಂಜೆ ಇದೇ ವೇದಿಕೆಯಲ್ಲಿ ನಡೆಯಲಿರುವ ಜಯಪ್ರಕಾಶ ನಾರಾಯಣ ಜನ್ಮ ದಿನ ಕಾರ್ಯಕ್ರಮದಲ್ಲಿ ಪ್ರಸನ್ನ ಅವರು ಉಪವಾಸ ಕೈಬಿಡಲಿದ್ದಾರೆ ಎನ್ನಲಾಗಿದೆ.

Post Comments (+)